ಬೆಂಗಳೂರು, ಮೇ.27 (DaijiworldNews/PY): ವಿಧಾನಸೌಧದಲ್ಲಿ ಗುರುವಾರ ಮಹತ್ವದ ಸಭೆ ನಡೆದಿದ್ದು, ಸಭೆಗೆ ಆರೋಗ್ಯ ಸಚಿವ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ಹಾಜರಾಗಿಲ್ಲ. ಆರೋಗ್ಯದಲ್ಲಿ ಏರುಪೇರಾಗಿರುವ ಹಿನ್ನೆಲೆ ಅವರು ಸಭೆಗೆ ಗೈರಾಗಿದ್ದಾರೆ ಎನ್ನಲಾಗಿದೆ.
ರಾಜ್ಯದಲ್ಲಿ ಕೊರೊನಾ ನಿಯಂತ್ರಣ ಸೇರಿದಂತೆ ಹಲವು ಮಹತ್ವದ ವಿಚಾರಗಳ ಬಗ್ಗೆ ಚರ್ಚೆ ನಡೆಸಲು ಹಾಗೂ ವಿವಿಧ ಅಭಿವೃದ್ದಿ ಕಾರ್ಯಗಳಿಗೆ ಒಪ್ಪಿಗೆ ಸೂಚಿಸುವ ಬಗ್ಗೆ ಇಂದು ವಿಧಾನಸೌಧದಲ್ಲಿ ಮಹತ್ವದ ಸಚಿವ ಸಂಪುಟ ಸಭೆ ನಡೆಯಿತು.
ಸಚಿವ ಸುಧಾಕರ್ ಅವರು ಚಿಕ್ಕಬಳ್ಳಾಪುರ ಪ್ರವಾಸವನ್ನೂ ರದ್ದುಪಡಿಸಿದ್ದು, ಸದ್ಯ ಸದಾಶಿವನಗರದಲ್ಲಿರುವ ತಮ್ಮ ನಿವಾಸದಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.