ಬೆಂಗಳೂರು, ಮೇ. 27 (DaijiworldNews/HR): ಜಿಂದಾಲ್ ಸಂಸ್ಥೆಗೆ ಜಮೀನು ನೀಡುವುದು ಹಿಂದಿನ ಸಂಪುಟದಲ್ಲಿ ತೆಗೆದುಕೊಂಡಿರುವ ತೀರ್ಮಾನವಾಗಿದ್ದು, ಈ ಸಂಪುಟ ಒಪ್ಪಿಗೆ ನೀಡಿಲ್ಲ ಎಂದು ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತಾಡಿರುವ ಅವರು, "ಜಿಂದಾಲ್ ಗೆ ಜಮೀನು ನೀಡಿರುವ ಕುರಿತು ಮುಂದೆ ಏನಾಗುತ್ತದೆ ಎನ್ನುವುದರ ಬಗ್ಗೆ ಗೊತ್ತಿಲ್ಲ. ಈ ಕುರಿತು ಹೈ ಕೋರ್ಟ್ ನಲ್ಲಿ ಪಿಐಎಲ್ ಇದೆ. ಸುಪ್ರೀಂ ಕೋರ್ಟ್ ನಲ್ಲಿಯೂ ಪ್ರಕರಣ ಇದ್ದು, ಈ ಹಿಂದೆ ಕರ್ನಾಟಕ ಹೈಕೋರ್ಟ್ ಹೇಳಿತ್ತು. ಈಗ ಪಿಐಎಲ್ ಆಧಾರದಲ್ಲಿ ಕೋರ್ಟ್ನಲ್ಲಿ ವಿಚಾರಣೆ ನಡೆಯುತ್ತಿದೆ. ಹೀಗಾಗಿ ಕೋರ್ಟ್ ಏನು ತೀರ್ಪು ನೀಡುತ್ತದೆ ನೋಡಿ ಮುಂದಿನ ತೀರ್ಮಾನ ಮಾಡಲಾಗುವುದು" ಎಂದರು.
ಇನ್ನು "ಪಶು ಸಂಗೋಪನೆ ಇಲಾಖೆಯಿಂದ ಪಿಪಿಪಿ ಮಾದರಿಯಲ್ಲಿ ಹಾವೇರಿಯಲ್ಲಿ 90 ಕೋಟಿ ರೂ. ವೆಚ್ಚದಲ್ಲಿ ಅಲ್ಟ್ರಾ ಪ್ಯಾಕೇಜ್ ಮಿಲ್ಕ್ ಪ್ರೊಡಕ್ಟ್ ಯುನಿಟ್ ಸ್ಥಾಪನೆ ಮಾಡಲಾಗುವುದು. ಕರ್ನಾಟಕ ಎಲೆಕ್ಟ್ರಿಕ್ ಎನರ್ಜಿ ಸ್ಟೋರೇಜ್ ಪಾಲಿಸಿಯನ್ವಯ 15% ಬಂಡವಾಳ ಸಬ್ಸಿಡಿಯನ್ನು ಕೊಡುವುದು" ಎಂದಿದ್ದಾರೆ.