ಬೆಂಗಳೂರು, ಮೇ 27 (DaijiworldNews/SM): ರಾಜ್ಯದಲ್ಲಿ ಗುರುವಾರದಂದು 24214 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. 476 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.
ಗುರುವಾರದಂದು ರಾಜ್ಯದಲ್ಲಿ 31459 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. 402203 ಮಂದಿ ಪ್ರಸ್ತುತ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ನಡುವೆ ರಾಜ್ಯದಲ್ಲಿ ಇಲ್ಲಿಯ ತನಕ 2523998 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, 2094369 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಒಟ್ಟು 27405 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.
ಇನ್ನು ಬೆಂಗಳೂರು ನಗರದಲ್ಲೂ ಸೋಂಕು ಇಳಿಕೆಯಾಗಿದ್ದು, ಇಂದು 5949 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. 273 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಬೀದರ್ ಜಿಲ್ಲೆಯಲ್ಲಿ 60 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದಾರೆ.