ನವದೆಹಲಿ, ಮೇ 27 (DaijiworldNews/SM): ಕೊರೋನಾ ಸೋಂಕಿನಿಂದ ಸಾವನ್ನಪ್ಪುತ್ತಿರುವವರ ಕುರಿತಂತೆ ಸರಕಾರದ ವಿರುದ್ಧ ಆರೋಪ ಮಾಡುತ್ತಿರುವ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ತಿರುಗಿಬಿದ್ದಿದೆ.
ಕಾಂಗ್ರೆಸ್ ಮುಖಂಡ ರಾಹುಲ್ ಇಂತಹ ಕಠಿಣ ಸಂದರ್ಭದಲ್ಲಿ ಟ್ವೀಟ್ ಮಾಡುವ ಬದಲು ಕಾಂಗ್ರೆಸ್ ಆಡಳಿತವಿರುವ ಸಿಎಂಗಳೊಂದಿಗೆ ಮಾತನಾಡಲಿ ಎಂದು ಬಿಜೆಪಿ ತಿರುಗೇಟು ನೀಡಿದೆ.
ಇನ್ನು ತಮ್ಮ ಟ್ವಿಟ್ಟರ್ ಖಾತೆಯ ಮೂಲಕ, ಸರಕಾರ ಕೋವಿಡ್ ಸಾವಿನ ಸಂಖ್ಯೆಯ ಸುಳ್ಳು ಮಾಹಿತಿ ನೀಡುತ್ತಿದೆ ಎಂದು ರಾಹುಲ್ ಆರೋಪಿಸಿದ್ದರು. ಈ ಹಿನ್ನೆಲೆ ಬಿಜೆಪಿ ಖಾರವಾಗಿ ಪ್ರತಿಕ್ರಿಯೆ ನೀಡಿದೆ.
ಅತಿ ಹೆಚ್ಚು ಸಾವಿನ ಪ್ರಮಾಣ ಇರುವ ರಾಜ್ಯಗಳಾದ ಮಹಾರಾಷ್ಟ್ರಗಳಂತಹ ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳ ಬಗ್ಗೆ ಉಲ್ಲೇಖಿಸಿದ್ದು, ಅಲ್ಲಿನ ಸಿಎಂ ಜೊತೆಗೆ ರಾಹುಲ್ ಮಾತನಾಡಲಿ ಎಂದು ಬಿಜೆಪಿ ವಾಗ್ದಾಳಿ ನಡೆಸಿದ್ದಾರೆ.