ಬೆಂಗಳೂರು, ಮೇ 27 (DaijiworldNews/SM): ಮುಖ್ಯಮಂತ್ರಿ ಬದಲಾವಣೆ ವಿಚಾರ ಮತ್ತೆ ಚರ್ಚೆಗೆ ಬಂದಿದೆ. ಸಿಎಂ ಸ್ಥಾನದಿಂದ ಯಡಿಯೂರಪ್ಪ ಅವರನ್ನು ಕೆಳಗಿಳಿಸಲು ಕೆಲವು ಸಚಿವರು, ಶಾಸಕರು ಪ್ರಯತ್ನಿಸುತ್ತಿದ್ದಾರೆ ಎನ್ನುವುದಕ್ಕೆ ಪ್ರವಾಸೋದ್ಯಮ ಸಚಿವ ಸಿ.ಪಿ ಯೋಗೇಶ್ವರ್ ಅವರ ಹೇಳಿಕೆ ಪುಷ್ಠಿ ನೀಡಿದೆ.
ನಾನು ನನ್ನ ಆಡಳಿತದಲ್ಲಿ ಮಗನಿಗೆ ಹಸ್ತಕ್ಷೇಪ ಮಾಡಲು ಬಿಡುವುದಿಲ್ಲ ಎಂದು ಪರೋಕ್ಷವಾಗಿ ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ಟಾಂಗ್ ನೀಡಿದ್ದಾರೆ. ಸಿಎಂ ಅವರ ಕಿರಿಯ ಮಗ ಬಿ.ವೈ.ವಿಜೇಂದ್ರ ಸರ್ಕಾರದಲ್ಲಿ ಹಸ್ತಕ್ಷೇಪ ನಡೆಸುತ್ತಿರುವುದಕ್ಕೆ ಯೋಗೇಶ್ವರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಮತ್ತೊಂದೆಡೆ ಭ್ರಷ್ಟಾಚಾರದ ಆರೋಪವನ್ನು ಕೂಡ ಕೆಲವು ಸಚಿವರು ಹಾಗೂ ಶಾಸಕರು ಪ್ರಮುಖ ಅಸ್ತ್ರವಾಗಿ ಬಳಸಿಕೊಂಡಿದ್ದಾರೆ ಎನ್ನಲಾಗಿದೆ. ಮತ್ತೊಂದೆಡೆ ಸಿ.ಪಿ ಯೋಗಿಶ್ವರ್ ಹೈಕಮಾಂಡ್ ಭೇಟಿಯಾಗಿದ್ದಾರೆ ಎನ್ನಲಾಗಿದೆ.
ಇದಕ್ಕೆ ಪ್ರತಿಕ್ರಿಯೆ ನೀಡಿರುವ ಸಿಎಂ ಬಿಎಸ್ ವೈ, ಹೈಕಮಾಂಡ್ ನಿಂದ ಅವರಿಗೆ ಉತ್ತರ ಸಿಕ್ಕಿರಬಹುದು. ಸದ್ಯ ನನ್ನ ಗುರಿ ಕೋವಿಡ್ ನಿಯಂತ್ರಿಸುವುದು ಎಂದಿದ್ದಾರೆ.