ನವದೆಹಲಿ, ಮೇ.28 (DaijiworldNews/PY): ಭಾರತದಲ್ಲಿ ಕಳೆದ 24 ಗಂಟೆಯಲ್ಲಿ 1,86,364 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2,75,55,457ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಗಳಲ್ಲಿ 3,660 ಮಂದಿ ಸೋಂಕಿಗೆ ಬಲಿಯಾಗಿದ್ದು, ಒಟ್ಟು 3,18,895 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ ಎಂದು ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಇನ್ನು ದೇಶದಲ್ಲಿ 2,59,459 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಒಟ್ಟು 2,48,93,410 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ ದೇಶದಲ್ಲಿ 23,43,152 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ನಿನ್ನೆ ಒಂದೇದಿನ 20,70,508 ಮಂದಿಯ ಕೊರೊನಾ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, ದೇಶದಲ್ಲಿ ಇಲ್ಲಿಯವರೆಗೆ 33,90,39,861 ಮಂದಿಯ ಕೊರೊನಾ ಸ್ಯಾಂಪಲ್ ಟೆಸ್ಟ್ ಮಾಡಲಾಗಿದೆ.
ಇನ್ನು ದೇಶದಲ್ಲಿ ಇಲ್ಲಿಯವರೆಗೆ 20,57,20,660 ಮಂದಿಗೆ ವ್ಯಾಕ್ಸಿನ್ ನೀಡಲಾಗಿದೆ.