ಬೆಂಗಳೂರು, ಮೇ.28 (DaijiworldNews/PY): "ಬೆಂಗಳೂರಿನಲ್ಲಿ ನಡೆದ ಸಾಮೂಹಿಕ ಅತ್ಯಾಚಾರಗೈದ ಪ್ರಕರಣ ಅಮಾನುಷ ಕೃತ್ಯ. ಆರೋಪಿಗಳಿಗೆ ತಕ್ಕ ಶಿಕ್ಷೆಯಾಗಲಿದೆ" ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಇದೊಂದು ಅಮಾನುಷ ಕೃತ್ಯ. ಇಂತಹ ಘಟನೆ ಸಹಿಸಲು ಸಾಧ್ಯವಿಲ್ಲ. ಆರೋಪಿಗಳಿಗೆ ಸರಿಯಾದ ಶಿಕ್ಷೆಯಾಗಲಿದೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುತ್ತೇವೆ" ಎಂದಿದ್ದಾರೆ.
"ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರ ಕಾರ್ಯವನ್ನು ಪ್ರಶಂಸಿಸುತ್ತೇನೆ. ಪ್ರಕರಣದ ಕುರಿತು ಸೂಕ್ತ ತನಿಖೆ ನಡೆಸಲು ಸೂಚನೆ ನೀಡಿದ್ದೇನೆ" ಎಂದು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಹಿಳೆಯೋರ್ವಳ ಸಹಾಯದಿಂದಬಾಂಗ್ಲಾದೇಶ ಮೂಲದ 23 ವರ್ಷದ ಯುವತಿಯ ಮೇಲೆ ಆರು ಮಂದಿ ಸಾಮೂಹಿಕ ಅತ್ಯಾಚಾರ ಎಸಗಿದ್ದು, ಆರೋಪಿಗಳು ಅತ್ಯಾಚಾರದ ವಿಡಿಯೋವನ್ನು ವೈರಲ್ ಮಾಡಿದ್ದಾರೆ. ಘಟನೆಯ ಸಂಬಂಧ ಬಾಂಗ್ಲಾದೇಶದ ಸಾಗರ್, ಮೊಹಮ್ಮದ್ ಬಾಬಾ ಶೇಖ್, ರಿದಾಯ್ ಬಾಬು ಹಾಗೂ ಹೈದರಾಬಾದ್ನ ಹಕೀಲ್ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ.