ಅಲಿಗಢ, ಮೇ.28 (DaijiworldNews/PY): ಉತ್ತರ ಪ್ರದೇಶದಲ್ಲಿ ಅಕ್ರಮವಾಗಿ ಮಾರಾಟ ಮಾಡಲಾಗುತ್ತಿದ್ದ ಮದ್ಯ ಸೇವಿಸಿ ಐವರು ಮೃತಪಟ್ಟ ಘಟನೆ ಅಲಿಗಢ ಜಿಲ್ಲೆಯ ಕರ್ಸುವಾ ಗ್ರಾಮದಲ್ಲಿ ನಡೆದಿದೆ.
ಸಾಂದರ್ಭಿಕ ಚಿತ್ರ
12 ಮಂದಿ ಗ್ರಾಮದಲ್ಲಿ ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಮದ್ಯವನ್ನು ಸೇವಿಸಿದ್ದು, ಈ ಪೈಕಿ ಐವರು ಸಾವನ್ನಪ್ಪಿದ್ದಾರೆ. ಉಳಿದ ಏಳು ಮಂದಿ ಅಸ್ವಸ್ಥರಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದೆ.
ಸ್ಥಳಕ್ಕೆ ಪೊಲೀಸರು ಹಾಗೂ ಸ್ಥಳೀಯ ಅಧಿಕಾರಿಗಳು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಲೋಧಾ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.