ಬೆಂಗಳೂರು, ಮೇ.28 (DaijiworldNews/PY): "ರಾಜ್ಯ ಸಿಎಂ ಬದಲಾವಣೆ ಇಲ್ಲ. ಈ ಬಗ್ಗೆ ಎಲ್ಲಿಯೂ ಚರ್ಚೆ ಆಗಿಲ್ಲ" ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, "ರಾಜ್ಯ ಸಿಎಂ ಬದಲಾವಣೆ ಇಲ್ಲ. ಈ ವಿಚಾರದ ಬಗ್ಗೆ ಎಲ್ಲಿಯೂ ಚರ್ಚೆ ನಡೆದಿಲ್ಲ. ಯಾವುದೇ ರೀತಿಯಾದ ಬದಲಾವಣೆ ಇಲ್ಲ" ಎಂದಿದ್ದಾರೆ.
"ನಾಯಕತ್ವ ಬದಲಾವಣೆ ವಿಚಾರವಾಗಿ ಎಲ್ಲಿಯೂ ಚರ್ಚೆ ನಡೆದಿಲ್ಲ. ಮುಂದಿನ ಎರಡೂ ವರ್ಷವೂ ಯಡಿಯೂರಪ್ಪ ಅವರೇ ನಮ್ಮ ಸಿಎಂ. ಶಾಸಕಾಂಗ ಪಕ್ಷದ ಸಭೆಯೂ ಇಲ್ಲ ಎಂದು ತಿಳಿಸಿದ್ದಾರೆ.