ಬೆಂಗಳೂರು, ಮೇ 28 (DaijiworldNews/SM): ರಾಜ್ಯದಲ್ಲಿ ಕೊರೋನಾ ಪ್ರಕರಣಗಳು ಇಳಿಕೆಯಾಗುತ್ತಿದೆ, ಆದರೆ, ಸಾವಿನ ಸಂಖ್ಯೆ ಮಾತ್ರ ಹೆಚ್ಚಳವಾಗುತ್ತದೆ. ಸೋಂಕಿಗೆ ಶುಕ್ರವಾರ ಒಂದೇ ದಿನ ಬರೋಬ್ಬರಿ 401 ಮಂದಿ ಬಲಿಯಾಗಿದ್ದಾರೆ.
ಇನ್ನು ಇಂದಿನ ವರದಿ ಪ್ರಕಾರ ರಾಜ್ಯದಲ್ಲಿ 22758 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 25,46,821ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ರಾಜ್ಯದಲ್ಲಿ ಹೊಸ ಪಾಸಿಟಿವ್ ಪ್ರಕರಣಗಳಿಗಿಂತ ಹೆಚ್ಚು ಅಂದರೆ 52,253 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಇದರೊಂದಿಗೆ ಗುಣಮುಖರಾದವರ ಸಂಖ್ಯೆ 21,46,621ಕ್ಕೆ ತಲುಪಿದೆ. ಇನ್ನು ಪ್ರಸ್ತುತ ರಾಜ್ಯದಲ್ಲಿ 3,72,373 ಸಕ್ರೀಯ ಪ್ರಕರಣಗಳಿವೆ.
ಇನ್ನು ರಾಜ್ಯದಲ್ಲಿ ಇಲ್ಲಿಯ ತನಕ ಒಟ್ಟು ಕೋವಿಡ್ ಸಾವಿನ ಸಂಖ್ಯೆ 27,806ಕ್ಕೆ ಏರಿಕೆಯಾಗಿದೆ. ಇನ್ನು ಬೆಂಗಳೂರಿನಲ್ಲಿ ಇಂದು 5,736 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ನಗರದಲ್ಲಿ ಸೋಂಕಿಗೆ 192 ಮಂದಿ ಬಲಿಯಾಗಿದ್ದಾರೆ.