ಚೆನ್ನೈ, ಮೇ.29 (DaijiworldNews/HR): ಕೊರೊನಾದಿಂದ ತಂದೆ-ತಾಯಿ ಕಳೆದುಕೊಂಡು ಅನಾಥರಾಗಿರುವ ಮಕ್ಕಳಿಗೆ 5 ಲಕ್ಷ ನೆರವು ಹಾಗೂ ಪದವಿ ಹಂತದವರೆಗೂ ಅವರ ಶಿಕ್ಷಣದ ಎಲ್ಲ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಪ್ರಕಟಿಸಿದ್ದಾರೆ.
ಕೊರೊನಾದಿಂದ ತಂದೆ-ತಾಯಿ ಕಳೆದುಕೊಂಡು ಅನಾಥರಾಗಿರುವ ಮಕ್ಕಳನ್ನು ಗುರುತಿಸಿ, ಅಗತ್ಯ ನೆರವು ಒದಗಿಸುವ ಸಲುವಾಗಿ ಈಗಾಗಲೇ ಜಿಲ್ಲಾ ಹಂತದಲ್ಲಿ ಈಗಾಗಲೇ ಜಿಲ್ಲಾಧಿಕಾರಿ ನೇತೃತ್ವದಲ್ಲಿ ವಿಶೇಷ ಕಾರ್ಯಪಡೆ ರಚಿಸಲಾಗಿದೆ ಎಂದು ಹೇಳಿಕೆ ತಿಳಿಸಿದೆ.
ಇನ್ನು ಶನಿವಾರ ಹಿರಿಯ ಅಧಿಕಾರಿಗಳ ಜೊತೆಗೆ ಮುಖ್ಯಮಂತ್ರಿ ಸಭೆ ನಡೆಸಿದ ಬಳಿಕ ಈ ತೀರ್ಮಾನ ಕೈಗೊಳ್ಳಲಾಗಿದೆ.
ಕೊರೊನಾ ಸೋಂಕಿನಿಂದ ತಂದೆ ಅಥವಾ ತಾಯಿ ಕಳೆದುಕೊಂಡಿದ್ದ ಸಂದರ್ಭದಲ್ಲಿ ಮಗುವಿನ ಹೆಸರಲ್ಲಿ 3 ಲಕ್ಷ ಠೇವಣಿ ಇಡಲಾಗುವುದು. ಇಬ್ಬರನ್ನು ಕಳೆದುಕೊಂಡಿದ್ದಲ್ಲಿ ಪೋಷಕರ ಸುಪರ್ದಿಯಲ್ಲಿ ಬೆಳೆಯಲು ಮಗುವಿಗೆ 18 ವರ್ಷ ಆಗುವವರೆಗೂ ಮಾಸಿಕ 3 ಸಾವಿರ ಭತ್ಯೆ ನೀಡಲಾಗುವುದು ಎಂದು ತಿಳಿಸಿದ್ದಾರೆ.