ನವದೆಹಲಿ, ಮೇ.30 (DaijiworldNews/HR): ಯೋಗಗುರು ಬಾಬಾ ರಾಮ್ದೇವ್ ಅವರು ಅಲೋಪಥಿ ಕುರಿತು ನೀಡಿರುವ ಹೇಳಿಕೆ ಪ್ರತಿಭಟಿಸಿ ದೇಶದಾದ್ಯಂತ ಜೂನ್ 1ರಂದು ಕರಾಳ ದಿನ ಆಚರಿಸಲು ನಿರ್ಧರಿಸಿದ್ದೇವೆ ಎಂದು ವೈದ್ಯರ ಸಂಘಟನೆಗಳ ಒಕ್ಕೂಟ ಹೇಳಿದೆ.
ಬಾಬಾ ರಾಮ್ದೇವ್ ಅವರು ತಮ್ಮ ಹೇಳಿಕೆಗೆ ಬೇಷರತ್ತಾಗಿ ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು ಎಂದು ಕೂಡ ಒಕ್ಕೂಟವು ಪ್ರಕಟಣೆಯಲ್ಲಿ ಆಗ್ರಹಿಸಿದೆ.
ಕೊರೊನಾ ವೈರಸ್ ಸಾಂಕ್ರಾಮಿಕ ರೋಗಕ್ಕೆ ಅಲೋಪಥಿಗೆ ಚಿಕಿತ್ಸೆ ನೀಡುವ ಸಾಮರ್ಥ್ಯವಿದೆಯೇ ಎಂದು ರಾಮದೇವ್ ಪ್ರಶ್ನಿಸಿದ್ದು, ಈ ಚಿಕಿತ್ಸಾ ವಿಧಾನದಿಂದ ಲಕ್ಷಾಂತರ ಮಂದಿ ಸಾಯುವಂತಾಗಿದೆ ಎಂದು ಆರೋಪಿಸಿದ್ದರು.
ಇನ್ನು ಉತ್ತರಾಖಂಡದ ಭಾರತೀಯ ವೈದ್ಯಕೀಯ ಮಂಡಳಿಯು (ಐಎಂಎ) ಸಾರ್ವಜನಿಕ ವೇದಿಕೆಯಲ್ಲಿ ಮುಕ್ತ ಚರ್ಚೆಗೆ ಬರುವಂತೆ ರಾಮ್ದೇವ್ ಅವರಿಗೆ ಸವಾಲೆಸೆದಿದೆ.