ನವದೆಹಲಿ, ಮೇ.30 (DaijiworldNews/HR): ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 1.65 ಲಕ್ಷ ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 3,460 ಮಂದಿ ಮೃತಪಟ್ಟಿದ್ದು, ಕಳೆದ 6 ವಾರಗಳಲ್ಲಿ ಪತ್ತೆಯಾದ ಅತೀ ಕಡಿಮೆ ಕೊರೊನಾ ಪ್ರಕರಣಗಳು ಇದಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಸಾಂಧರ್ಭಿಕ ಚಿತ್ರ
ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿಯ ಪ್ರಕಾರ, ಕಳೆದ ಒಂದು ದಿನದಲ್ಲಿ 1,65,553 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ದೇಶದಲ್ಲಿ ಒಟ್ಟಾರೆ ಸೋಂಕಿತರ ಪ್ರಮಾಣ 2,78,94,800ಕ್ಕೆ ಏರಿಕೆಯಾಗಿದೆ. ಸುಮಾರು 21,14,508 ಸಕ್ರಿಯ ಪ್ರಕರಣಗಳಿದ್ದು, 2.54 ಕೋಟಿ ಜನರು ಸೋಂಕಿನಿಂದ ಗುಣಮುಖರಾಗಿದ್ದು, ಇಲ್ಲಿಯವರೆಗೆ ಸುಮಾರು 3.25 ಲಕ್ಷ ಜನರು ಮೃತಪಟ್ಟಿದ್ದಾರೆ.
ಇನ್ನು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆಯ ವರದಿ ಪ್ರಕಾರ ಈವರೆಗೂ 34,31,83,748 ಮಂದಿಯನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ಮೇ 29 ರಂದು 20,63,839 ಜನರ ಗಂಟಲು ದ್ರವ ಮಾದರಿಯ ಪರೀಕ್ಷೆ ನಡೆಲಾಗಿದೆ.