ನವದೆಹಲಿ, ಮೇ.30 (DaijiworldNews/HR): ತಿಂಗಳಿಗೊಮ್ಮೆ ಅರ್ಥಹೀನ ಮಾತುಕತೆಯೊಂದಿಗೆ ಕೊರೊನಾ ವಿರುದ್ಧ ಹೋರಾಡಲು ಸಾಧ್ಯವಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ 'ಮನ್ ಕೀ ಬಾತ್' ರೇಡಿಯೊ ಕಾರ್ಯಕ್ರಮದ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, "ಕೊರೊನಾ ವಿರುದ್ಧ ಹೋರಾಡಲು ಸರಿಯಾದ ಬದ್ಧತೆ, ನೀತಿ ಮತ್ತು ನಿರ್ಣಯದ ಅಗತ್ಯವಿದೆ, ಕೊರೊನಾ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಹೊರಡಿಸಿರುವ ಅಂಕಿ ಅಂಶವು ಸರಿಯಿಲ್ಲ" ಎಂದಿದ್ದಾರೆ.
ಇನ್ನು ಪ್ರತಿ ತಿಂಗಳು ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ದೇಶವನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡುತ್ತಾರೆ. ಇದು ತಿಂಗಳ ಕೊನೆಯ ಭಾನುವಾರದಂದು ಪ್ರಸಾರವಾಗುತ್ತದೆ.
ಮೇ 30ರಂದು ಭಾನುವಾರ ನಡೆದ ಮನ್ ಕೀ ಬಾತ್ 77ನೇ ಕಂತಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಕೊರೊನಾ ವಿರುದ್ಧದ ಹೋರಾಟ ಸೇರಿದಂತೆ ಅನೇಕ ವಿಚಾರಗಳ ಬಗ್ಗೆ ಪ್ರಸ್ತಾಪಿಸಿದ್ದಾರೆ.