ಬೆಂಗಳೂರು, ಮೇ 30 (DaijiworldNews/SM): ಸಿಎಂ ಬಿಎಸ್ ಯಡಿಯೂರಪ್ಪ ಅವರನು ಬದಲಾಯಿಸಿದ್ದಲ್ಲಿ ಬೇರೆ ಸಿಎಂ ಅಭ್ಯರ್ಥಿಗಳಿಲ್ಲ ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ನೀಡಿರುವ ಹೇಳಿಕೆಗೆ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿರುಗೇಟು ನೀಡಿದ್ದಾರೆ.
ಬಿಜೆಪಿ ಪಕ್ಷದಲ್ಲಿ ಸದ್ಯ ನಾಯಕರಿಗೆ ಕೊರತೆ ಇಲ್ಲ ಎಂದು ನಳಿನ್ ಕುಮಾರ್ ತಿರುಗೇಟು ನೀಡಿದ್ದಾರೆ. ಕೇಂದ್ರದಲ್ಲಿ ನರೇಂದ್ರಮೋದಿ ನೇತೃತ್ವದ ಸರ್ಕಾರ ಏಳು ವರ್ಷ ಪೂರೈಸಿದ್ದು ಈ ಹಿನ್ನೆಲೆಯಲ್ಲಿ ಮಾಧ್ಯಮಕ್ಕೆ ರಾಜ್ಯಾಧ್ಯಕರು ಪ್ರತಿಕ್ರಿಯೆ ನೀಡಿದ್ದಾರೆ.
ಸದ್ಯ ಯಡಿಯೂರಪ್ಪನವರು ಸಮರ್ಥ ನಾಯಕರಾಗಿದ್ದಾರೆ. ಅವರ ಅನುಭವ ಪರಿಗಣಿಸಿ ಅವರನ್ನೇ ಮುಖ್ಯಮಂತ್ರಿಯಾಗಿ ಮುಂದುವರಿಸಲು ನಿರ್ಧರಿಸಿದ್ದೇವೆ. ರಾಜ್ಯದಲ್ಲಿ ಯಾವುದೇ ನಾಯಕತ್ವ ಬದಲಾವಣೆ ಇಲ್ಲ. ಆದರೆ, ಕಾಂಗ್ರೆಸ್ ನಲ್ಲಿ ನಿಜವಾಗಿಯೂ ನಾಯಕರ ಕೊರತೆ ಇದೆ ಎಂದು ಅವರು ಹೇಳಿದ್ದಾರೆ.