ನವದೆಹಲಿ, ಮೇ.31 (DaijiworldNews/HR): ಭಾರತದಲ್ಲಿ ಕಳೆದ 24 ಗಂಟೆಯಲ್ಲಿ 1,52,734 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2,80,47,534ಕ್ಕೆ ಏರಿಕೆಯಾಗಿದೆ.
ಸಾಂಧರ್ಭಿಕ ಚಿತ್ರ
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ಪ್ರಕಾರ, ಕಳೆದ 24 ಗಂಟೆಯಲ್ಲಿ 3,128 ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 3,29,100ಕ್ಕೆ ಏರಿಕೆಯಾಗಿದೆ.
ಇನ್ನು ಭಾರತದಲ್ಲಿ 20,26,092 ಕೊರೊನಾ ಸಕ್ರಿಯ ಪ್ರಕರಣಗಳಿದ್ದು, 2,56,92,342 ಸೋಂಕಿತರು ಗುಣಮುಖರಾಗಿದ್ದಾರೆ.
ಕಳೆದ 24 ಗಂಟೆಯಲ್ಲಿ 2,38,022 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ತಿಳಿದು ಬಂದಿದೆ.
ಇನ್ನು ದೇಶದಲ್ಲಿ ಈವರೆಗೆ 21,31,54,129 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.