ಬೆಂಗಳೂರು, ಮೇ 31 (DaijiworldNews/SM): ರಾಜ್ಯದಲ್ಲಿ ಕೊರೋನಾ ಸೋಂಕು ನಿಯಂತ್ರಣಕ್ಕೆ ಬರುತ್ತಿದೆ. ಕಳೆದ ಒಂಡು ತಿಂಗಳಿನಿಂದ ಪತ್ತೆಯಾಗುತ್ತಿದ್ದ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದೆ. ಒಂದೊಮ್ಮೆ 50 ಸಾವಿರ ಪ್ರಕರಣಗಳು ಪತ್ತೆಯಾಗುತ್ತಿದ್ದ ನಮ್ಮ ರಾಜ್ಯದಲ್ಲಿ ಇಂದು ಹದಿನಾರು ಸಾವಿರಕ್ಕೆ ಇಳಿಮುಖವಾಗಿದೆ.
ಸೋಮವಾರದಂದು ರಾಜ್ಯದಲ್ಲಿ 16604 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. 44473 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. 411 ಮಂದಿ ಇಂದು ಸೋಂಕಿಗೆ ಬಲಿಯಾಗಿದ್ದಾರೆ. ಪ್ರಸ್ತುತ 313730 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇನ್ನು ರಾಜ್ಯದಲ್ಲಿ ಒಟ್ಟು 2604431 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಈ ಪೈಕಿ 2261590 ಮಂದಿ ಗುಣಮುಖರಾಗಿ ಬಿಡುಗಡೆಗೊಂಡರೆ, 29090 ಮಂದಿ ಸೋಂಕಿನಿಂದಾಗಿ ಸಾವನ್ನಪ್ಪಿದ್ದಾರೆ.