ನವದೆಹಲಿ, ಜೂ.01 (DaijiworldNews/HR): ಭಾರತದಲ್ಲಿ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಇಳಿಮುಖವಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 1,27,510 ಜನರಲ್ಲಿ ಸೋಂಕು ಪತ್ತೆಯಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2,81,75,044ಕ್ಕೆ ಏರಿಕೆಯಾಗಿದೆ.
ಸಾಂಧರ್ಭಿಕ ಚಿತ್ರ
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ಪ್ರಕಾರ, ಕಳೆದ 24 ಗಂಟೆಯಲ್ಲಿ 2,795 ಜನರು ಕೊರೊನಾ ಸೋಂಕಿಗೆ ಬಲಿಯಾಗಿದ್ದು, ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 3,31,895ಕ್ಕೆ ಏರಿಕೆಯಾಗಿದೆ.
ಇನ್ನು ದೇಶದಲ್ಲಿ 18,95,520 ಕೊರೊನಾ ಸಕ್ರಿಯ ಪ್ರಕರಣಗಳಿದ್ದು 2,59,47,629 ಸೋಂಕಿತರು ಗುಣಮುಖರಾಗಿದ್ದು, ಕಳೆದ 24 ಗಂಟೆಯಲ್ಲಿ 2,55,287 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ಮಾಹಿತಿ ನೀಡಿದೆ.
ಭಾರತರಲ್ಲಿ ಇದುವರೆಗೆ ಒಟ್ಟು 21,60,46,638 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.