ನವದೆಹಲಿ, ಜೂ.01 (DaijiworldNews/HR): ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಕೊರೊನಾ ಲಸಿಕೆಯ 1.57 ಕೋಟಿಗೂ ಹೆಚ್ಚು ಡೋಸ್ಗಳು ಈಗ ಲಭ್ಯವಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ತಿಳಿಸಿದೆ.
ಈ ಕುರಿತು ಮಾಹಿತಿ ನೀಡಿರುವ ಕೇಂದ್ರ ಆರೋಗ್ಯ ಸಚಿವಾಲಯ, "ಕೇಂದ್ರವು ಇಲ್ಲಿಯವರೆಗೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ 23 ಕೋಟಿಗೂ ಹೆಚ್ಚು ಡೋಸ್ಗಳನ್ನು ವಿತರಿಸಿದೆ" ಎಂದು ಪ್ರಕಟಣೆ ತಿಳಿಸಿದೆ.
ಇನ್ನು "ರಾಷ್ಟ್ರವ್ಯಾಪಿ ಲಸಿಕಾ ಅಭಿಯಾನದ ಭಾಗವಾಗಿ ಕೇಂದ್ರ ಸರ್ಕಾರವು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಉಚಿತವಾಗಿ ಲಸಿಕೆಗಳನ್ನು ನೀಡುತ್ತಿದ್ದು, ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳು ಲಸಿಕೆಗಳನ್ನು ನೇರವಾಗಿ ಖರೀದಿಸಲೂ ಸಹಕರಿಸುತ್ತಿದೆ" ಎಂದು ಹೇಳಿದೆ.