ನವದೆಹಲಿ, ಜೂ.01 (DaijiworldNews/HR): ಪಶ್ಚಿಮಬಂಗಾಳ ಮಾಜಿ ಮುಖ್ಯ ಕಾರ್ಯದರ್ಶಿ ಅಲಪನ್ ಬಂಡೋಪಾಧ್ಯಾಯ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯ ಸಭೆಗೆ ಗೈರು ಹಾಜರಾಗಿದ್ದು, ಇದಕ್ಕೆ ಕಾರಣ ಏನು ಎಂಬ ಬಗ್ಗೆ ವಿವರಣೆ ನೀಡುವಂತೆ ಕೇಂದ್ರ ಸರ್ಕಾರ ಮಂಗಳವಾರ ಶೋಕಾಸ್ ನೋಟಿಸ್ ಜಾರಿ ಮಾಡಿದೆ.
ಪಶ್ಚಿಮಬಂಗಾಳ ಮಾಜಿ ಮುಖ್ಯಕಾರ್ಯದರ್ಶಿ ಅಲಪನ್ ಬಂಡೋಪಾಧ್ಯಾಯ ಅವರಿಗೆ ವಿಪತ್ತು ನಿರ್ವಹಣಾ ಕಾಯ್ದೆ 2005ರ ಅಡಿ 3 ದಿನಗಳೊಳಗೆ ಲಿಖಿತ ಉತ್ತರ ನೀಡುವಂತೆ ಶೋಕಾಸ್ ನೋಟಿಸ್ ಮಾಡಿದೆ ಎಂದು ವರದಿಯಾಗಿದೆ.
ಮಮತಾ ಬ್ಯಾನರ್ಜಿ ಮತ್ತು ಬಂಡೋಪಾಧ್ಯಾಯ ಶುಕ್ರವಾರ ಬಂಗಾಳಕ್ಕೆ ಭೇಟಿ ನೀಡಿದ್ದ ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿ ಯಸ್ ಚಂಡಮಾರುತದಿಂದ ಸಂಭವಿಸಿದ ಹಾನಿ ಕುರಿತ ವರದಿಯನ್ನು ನೀಡಿದ್ದು, ನಂತರ ನಡೆದ ಪುನರ್ ಪರಿಶೀಲನಾ ಸಭೆಗೆ ಇಬ್ಬರು ಗೈರು ಹಾಜರಾಗಿದ್ದರು.
ಇನ್ನು ಈ ಘಟನೆ ನಂತರ ಬಂಗಾಳದ ಮುಖ್ಯ ಕಾರ್ಯದರ್ಶಿಯನ್ನು ವಾಪಸ್ ಕರೆಯಿಸಿಕೊಳ್ಳುವುದಾಗಿ ತಿಳಿಸಿ, ಸಿಬ್ಬಂದಿ ಮತ್ತು ತರಬೇತಿ ಇಲಾಖೆಗೆ ಮೇ 31ಎಂದು ವರದಿ ಮಾಡಿಕೊಳ್ಳಬೇಕು ಎಂದು ಬಂಡೋಪಾಧ್ಯಾಯ ಅವರಿಗೆ ಕೇಂದ್ರ ಸರ್ಕಾರ ಸೂಚಿಸಿತ್ತು.