ನವದೆಹಲಿ, ಜೂ. 1 (DaijiworldNews/SM): ಕೊರೋನಾ ಸೋಂಕು ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಠಿಯಿಂದಾಗಿ ಸಿಬಿಎಸ್ ಇ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ನಡೆಸದಿರಲು ಕೇಂದ್ರ ಸರಕಾರ ನಿರ್ಧರಿಸಿದೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಭೆಯಲ್ಲಿ ಈ ಮಹತ್ವದ ನಿರ್ಣಯ ಕೈಗೊಳ್ಳಲಾಗಿದೆ. ಕೇಂದ್ರದ ಹಿರಿಯ ಸಚಿವರಾದ ಗೃಹ ಸಚಿವ ಅಮಿತ್ ಶಾ, ಪಿಯೂಶ್ ಗೋಯಲ್ ಸೇರಿದಂತೆ ಹಲವು ಸಚಿವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಭೆ ನಡೆಸಿದ್ದರು. ಆ ಸಭೆಯಲ್ಲಿ ಮಹತ್ವದ ನಿರ್ಣಯ ಕೈಗೊಳ್ಳಲಾಗಿದೆ.
ವಿದ್ಯಾರ್ಥಿಗಳ ಆರೋಗ್ಯ ಹಾಗೂ ಭವಿಷ್ಯದ ಹಿತದೃಷ್ಠಿಯಿಂದಾಗಿ ಈ ನಿರ್ಧಾರ ತೆಗೆದುಕೊಂಡಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಟ್ವೀಟ್ ಮಾಡಿದ್ದಾರೆ.