ಬೆಂಗಳೂರು, ಜೂ. 1 (DaijiworldNews/SM): ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ಕೇಂದ್ರ ಸರಕಾರ ಸಿಬಿಎಸ್ಇ ಹನ್ನೆರಡನೇ ತರಗತಿಗಳ ಪರೀಕ್ಷೆಗಳನ್ನು ರದ್ದು ಮಾಡಿದ್ದು ಇದೀಗ ರಾಜ್ಯದ ದ್ವಿತೀಯ ಪಿಯುಸಿ ತರಗತಿಗಳ ಪರೀಕ್ಷೆಗಳೂ ಕೂಡ ರದ್ದಾಗುವುದೇ ಎಂಬ ಬಗ್ಗೆ ಚರ್ಚೆಯಾಗುತ್ತಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಶಿಕ್ಷಣ ಸಚಿವ ಸುರೇಶ್ ಕುಮಾರ್ ಪರಿಸ್ಥಿತಿ ಅವಲೋಕಿಸಿ ಮುಂದಿನ ನಿರ್ಧಾರ ಪ್ರಕಟಿಸಲಾಗುವುದು ಎಂದು ತಿಳಿಸಿದೆ.
ಕೊರೋನಾ ಸೋಂಕು ಎರಡನೇ ಅಲೆಯ ಬೆನ್ನಲ್ಲೇ ಮೂರನೇ ಅಲೆಯ ಭೀತಿಯಿದ್ದು, ಈ ನಡುವೆ ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಕೇಂದ್ರ ಚಿಂತಿಸಿದೆ. ಇದರ ಬೆನ್ನಲ್ಲೇ ರಾಜ್ಯ ಸರಕಾರ ಕೂಡ ಹನ್ನೆರಡನೇ ತರಗತಿಗಳ ಪರೀಕ್ಷೆಗಳನ್ನು ರದ್ದುಗೊಳಿಸಬೇಕೆಂದು ಒತ್ತಾಯಗಳು ಕೇಳಿಬರುತ್ತಿವೆ. ಈ ವಿಚಾರಕ್ಕೆ ಸಂಬಂಧಿಸಿದ ಪ್ರತಿಕ್ರಿಯೆ ನೀಡಿರುವ ಶಿಕ್ಷಣ ಸಚಿವ ಸುರೇಶ್ ಕುಮಾರ್, ರಾಜ್ಯದ ತಜ್ಞರು ಸಚಿವರು, ಪೋಷಕರ ಅಭಿಪ್ರಾಯ ಸಂಗ್ರಹಿಸಲಾಗುತ್ತಿದೆ. ಈ ಬಗ್ಗೆ ತಕ್ಷಣ ಚರ್ಚಿಸಿ ನಿರ್ಧಾರವನ್ನು ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.