ಬೆಂಗಳೂರು, ಜೂ 02 (DaijiworldNews/MS): ಕೇಂದ್ರ ಸರ್ಕಾರ ನಿರ್ಧರಿಸಿದಂತೆಯೇ ರಾಜ್ಯ ಸರ್ಕಾರ ಕೂಡಾ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ವಾರ್ಷಿಕ ಪರೀಕ್ಷೆಗಳನ್ನು ರದ್ದು ಮಾಡಬೇಕು ಎಂಬ ವಿರೋಧ ಪಕ್ಷಗಳ ಅಭಿಪ್ರಾಯದ ನಡುವೆ ರಾಜ್ಯದಲ್ಲೂಎಸ್ಸೆಸ್ಸೆಲ್ಸಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ರದ್ದು ಪಡಿಸಲಾಗುತ್ತಾ ಎನ್ನುವ ಬಗ್ಗೆ ಪ್ರತಿಕ್ರಿಯಿಸಿರುವಂತ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್, ಅತ್ಯಂತ ಶೀಘ್ರದಲ್ಲಿಯೇ ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.
ಈ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಎಸ್.ಎಸ್.ಎಲ್.ಸಿ ಹಾಗೂ ದ್ವಿತೀಯ ಪಿಯು ಪರೀಕ್ಷೆಗಳ ಕುರಿತಂತೆ ಆದಷ್ಟು ಶೀಘ್ರ ಸೂಕ್ತ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.
ಪರೀಕ್ಷೆಗಳ ಬಗ್ಗೆ ಶಿಕ್ಷಕರು, ಶಿಕ್ಷಣ ತಜ್ಞರು ಮತ್ತು ಪೋಷಕ ವರ್ಗಗಳೊಂದಿಗೆ ವ್ಯಾಪಕ ಸಮಾಲೋಚನಾ ಪ್ರಕ್ರಿಯೆ ಚಾಲ್ತಿಯಲ್ಲಿರುವ ಕಾರಣ, ಮಕ್ಕಳ ಆರೋಗ್ಯ ಹಾಗೂ ಭವಿಷ್ಯದ ಹಿತದೃಷ್ಟಿಯಿಂದ ಸೂಕ್ತ ನಿರ್ಧಾರವನ್ನು ಬರುವ ಕೆಲವು ದಿನಗಳಲ್ಲಿ ತೆಗೆದುಕೊಳ್ಳಲಾಗುತ್ತದೆ ಎಂದಿದ್ದಾರೆ.