ಬೆಂಗಳೂರು, ಜೂ. 02 (DaijiworldNews/SM): ರಾಜ್ಯದಲ್ಲಿ ಲಾಕ್ ಡೌನ್ ವಿಸ್ತರಣೆಗೊಳಿಸುವ ಬಗ್ಗೆ ಸಾಕಷ್ಟು ಚರ್ಚೆಗಳಾಗಿದ್ದು, ಈ ಬಗ್ಗೆ ಸಿಎಂ ಬಿಎಸ್ ಯಡಿಯೂರಪ್ಪ ಸಚಿವರ ಸಭೆ ನಡೆಸಿದ್ದಾರೆ. ಲಾಕ್ ಡೌನ್ ವಿಸ್ತರಣೆ ಕುರಿತಂತೆ ಗುರುವಾರದಂದು ಅಂತಿಮ ನಿರ್ಧಾರ ಪ್ರಕಟಗೊಳ್ಳುವ ಸಾಧ್ಯತೆ ಇದೆ.
ಜೂನ್ 7ರ ಬಳಿಕ ಒಂದು ವಾರಗಳ ಕಾಲ ಲಾಕ್ ಡೌನ್ ವಿಸ್ತರಿಸುವಂತೆ ಸಭೆಯಲ್ಲಿ ಸಲಹೆಗಳನ್ನು ನೀಡಲಾಗಿದೆ. ಸಚಿವರು ಕೂಡ ಲಾಕ್ ಡೌನ್ ಒಂದುವಾರಗಳಾ ಕಾಲ ವಿಸ್ತರಿಸಬೇಕೆಂಬ ಒಲವನ್ನು ಹೊಂದಿದ್ದಾರೆ. ಬಹುತೇಕ ಜೂನ್ 15ರ ತನಕ ಲಾಕ್ ಡೌನ್ ವಿಸ್ತರಣೆಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ. ಆದರೆ, ಈ ಬಗ್ಗೆ ಅಂತಿಮ ಆದೇಶ ಪ್ರಕಟಗೊಳ್ಳುವುದೊಂದೇ ಬಾಕಿ ಉಳಿದಿದೆ.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಗುರುವಾರದಂದು ಲಾಕ್ ಡೌನ್ ವಿಸ್ತರಣೆಯ ಬಗ್ಗೆ ಅಧಿಕೃತ ಘೋಷಣೆ ಮಾಡುವ ಸಾಧ್ಯತೆಗಳಿವೆ.