ಚಿತ್ರದುರ್ಗ, ಜೂ.03 (DaijiworldNews/HR): ಕೊರೊನಾ ಲಸಿಕೆ ವಿಚಾರದಲ್ಲಿ ಜಾತಿ, ರಾಜಕಾರಣ ಸರಿಯಲ್ಲ, ಬೇಧವಿಲ್ಲದೆ ಎಲ್ಲಾ ಜಾತಿ, ಧರ್ಮದ ಜನರಿಗೆ ಲಸಿಕೆ ನೀಡಲಾಗುತ್ತಿದ್ದು, ಕಾಂಗ್ರೆಸ್ ಮಾತು ಕೇಳಿದರೆ ಜೀವ ಹೋಗುತ್ತವೆ. ಬಿಜೆಪಿ ಮಾತು ಕೇಳಿ ಲಸಿಕೆ ಪಡೆದರೆ ಜೀವ ಉಳಿಯುತ್ತವೆ" ಎಂದು ಸಮಾಜ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ.
ಈ ಕುರಿತು ಎಂಎಲ್ ಸಿ ಬಿ.ಕೆ.ಹರಿಪ್ರಸಾದ್ ಅವರ ಒಂದು ಸಮುದಾಯಕ್ಕೆ ಲಸಿಕೆ ಹೇಳಿಕೆಗೆ ತಿರುಗೇಟು ನೀಡಿದ ಅವರು, "ಬಿ.ಕೆ.ಹರಿಪ್ರಸಾದ್ ನಿಮ್ಮ ಬುದ್ಧಿ ಒಳ್ಳೆಯತನಕ್ಕೆ ಮಾತ್ರ ಬಳಸಿ, ಕೊರೊನಾ ಲಸಿಕೆ ವಿಚಾರದಲ್ಲಿ ಜಾತಿ, ರಾಜಕಾರಣ ಸರಿಯಲ್ಲ. ಬೇಧವಿಲ್ಲದೆ ಎಲ್ಲಾ ಜಾತಿ, ಧರ್ಮದ ಜನರಿಗೆ ಲಸಿಕೆ ನೀಡಲಾಗುತ್ತಿದೆ" ಎಂದರು.
ಮುಖ್ಯಮಂತ್ರಿ ಬದಲಾವಣೆ ಕುರಿತು ಮಾತನಾಡಿದ ಶ್ರೀರಾಮುಲು, ಸಿಎಂ ಬಿಎಸ್ ಯಡಿಯೂರಪ್ಪ ಶಕ್ತಿ ಮೀರಿ ಉತ್ತಮ ಕೆಲಸ ಮಾಡುತ್ತಿದ್ದು, ಸಿಎಂ ಬದಲಾವಣೆ ಇಲ್ಲ ಎಂದು ಬಿಜೆಪಿ ಹೈಕಮಾಂಡ್ ಸ್ಪಷ್ಟಪಡಿಸಿದೆ. ಯಾರೋ ಸಣ್ಣ ಪುಟ್ಟವರು ದೆಹಲಿಗೆ ಹೋಗಿ ರಾಜಕಾರಣ ಸರಿಯಲ್ಲ ಎಂದು ಸಚಿವ ಸಿ.ಪಿ.ಯೋಗೀಶ್ವರ್ ಗೆ ಟಾಂಗ್ ನೀಡಿದ್ದಾರೆ.
ಇನ್ನು ಲಾಕ್ಡೌನ್ನಿಂದಾಗಿ ಕೊರೊನಾ ಸೋಂಕು ಕಡಿಮೆಯಾಗಿದ್ದು, ಹಂತ ಹಂತವಾಗಿ ಲಾಕ್ ಡೌನ್ ಸಡಿಲೀಕರಣ ಮಾಡುತ್ತೇವೆ ಎಂದು ಹೇಳಿದ್ದಾರೆ.