ನವದೆಹಲಿ, ಜೂ.04 (DaijiworldNews/HR): ಭಾರತದಲ್ಲಿ ಕಳೆದ 24 ಗಂಟೆಯಲ್ಲಿ 1,32,364 ಜನರಲ್ಲಿ ಸೋಂಕು ಪತ್ತೆಯಾಗಿದ್ದು, ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2,85,74,350ಕ್ಕೆ ಏರಿಕೆಯಾಗಿದೆ.
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಾರ, ಕಳೆದ 24 ಗಂಟೆಯಲ್ಲಿ 2,713 ಮಂದಿ ಸೋಂಕಿಗೆ ಬಲಿಯಾಗಿದ್ದು, ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 3,40,702ಕ್ಕೆ ಏರಿಕೆಯಾಗಿದೆ.
ಇನ್ನು "ದೇಶದಲ್ಲಿ 16,35,993 ಕೊರೊನಾ ಸಕ್ರಿಯ ಪ್ರಕರಣಗಳಿದ್ದು 2,65,97,655 ಸೋಂಕಿತರು ಗುಣಮುಖರಾಗಿದ್ದಾರೆ.
ಕಳೆದ 24 ಗಂಟೆಯಲ್ಲಿ 2,07,071 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ಮಾಹಿತಿ ನೀಡಿದೆ.
ಇನ್ನು ಗುರುವಾರ 20,75,428 ಜನರಿಗೆ ಕೊರೊನಾ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, ದೇಶದಲ್ಲಿ ಈವರೆಗೆ 35,74,33,846 ಜನರಿಗೆ ಟೆಸ್ಟ್ ಮಾಡಲಾಗಿದೆ.