ನವದೆಹಲಿ, ಜೂ.04 (DaijiworldNews/HR): ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್ಬಿಐ) ಹಣಕಾಸು ನೀತಿ ಪರಿಶೀಲನೆ ಮಾಡಿ ರೆಪೋ ದರ, ರಿವರ್ಸ್ ರೆಪೋ ದರದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಶುಕ್ರವಾರ ತಿಳಿಸಿದೆ.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಆರ್ಬಿಐ ಗವರ್ನರ್ ಶಕ್ತಿಕಾಂತ ದಾಸ್, "ರೆಪೋ ದರವನ್ನು ಈ ಹಿಂದಿನ ಶೇಕಡಾ 4ರಷ್ಟು ಮತ್ತು ರಿವರ್ಸ್ ರೆಪೋ ದರವನ್ನು ಶೇಕಡಾ 3.35ರಷ್ಟು ಉಳಿಸಿಕೊಂಡಿದೆ" ಎಂದರು.
ಕೊರೊನಾ ಹಿನ್ನಲೆಯಲ್ಲಿ ಆರ್ಬಿಐ ಬಡ್ಡಿದರವನ್ನು ಬದಲಿಸಲಿಲ್ಲ. ಏಪ್ರಿಲ್ 2021ರಲ್ಲಿ ನಡೆದ ಕೊನೆಯ ಎಂಪಿಸಿ ಸಭೆಯಲ್ಲಿ ರೆಪೋ, ರಿವರ್ಸ್ ರೆಪೋ ದರಗಳನ್ನು ಬದಲಿಸಲಿಲ್ಲ.
ಇನ್ನು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ 2021-22ರ ಹಣಕಾಸು ವರ್ಷದ ಜಿಡಿಪಿ ಬೆಳವಣಿಗೆ ಮುನ್ಸೂಚನೆಯನ್ನು ಈ ಹಿಂದಿನ ಶೇಕಡಾ 10.5 ರಿಂದ ಶೇಕಡಾ 9.5ಕ್ಕೆ ತಗ್ಗಿಸಿದೆ ಎನ್ನಲಾಗಿದೆ.