ಬೆಂಗಳೂರು, ಜೂ 4(DaijiworldNews/MS): ರಾಜ್ಯದಲ್ಲಿ ಕೋವಿಡ್ ಪಾಸಿಟಿವಿಟಿ ತಟಸ್ಥ ಸ್ಥಿತಿಯಲ್ಲಿ ಇದ್ದು ಶೇ. 12.4ರಷ್ಟಿದೆ, ಆದರೆ ಸಾವಿನ ಸಂಖ್ಯೆ ಕಡಿಮೆಯಾಗಿಲ್ಲ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಹೇಳಿದರು.
ಮಾಧ್ಯಮದೊಂದಿಗೆ ಮಾತನಾಡಿದ ಅವರು, ಕೋವಿಡ್ ಪಾಸಿಟಿವಿಟಿ ದರವನ್ನು ಶೇಕಡಾ 5 ಕ್ಕಿಂತ ಕಡಿಮೆ ಮಾಡಲು ಸರ್ಕಾರ ನೋಡುತ್ತಿದೆ. ರಾಜಧಾನಿ ಬೆಂಗಳೂರಿನಲ್ಲಿ ಪ್ರತಿದಿನ ಒಂದು ಲಕ್ಷ ಟೆಸ್ಟ್ ಮಾಡಲಾಗುತ್ತಿದೆ. ಹೀಗಾಗಿ ಪ್ರಕರಣಗಳ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹೇಳಿದರು.
ರಾಜ್ಯದಲ್ಲಿ ಕಳೆದ ಎರಡು ದಿನಗಳಿಂದ ಕೇಸ್ ಹೆಚ್ವಳ ಆಗಿಲ್ಲ. ನಿನ್ನೆ, ಮೊನ್ನೆ ಕೋವಿಡ್ ಪ್ರಕರಣಗಳ ಏರಿಕೆ ಗಣನೀಯವಾಗಿಲ್ಲ. ನಾವು ಪ್ರಕರಣಗಳಿಗಿಂತ ಪಾಸಿಟಿವಿಟಿ ದರವನ್ನು ಕೇಂದ್ರೀಕರಿಸಬೇಕು. ಇದಕ್ಕಾಗಿಯೇ ಮುಖ್ಯಮಂತ್ರಿ ಲಾಕ್ ಡೌನ್ ಅನ್ನು ಒಂದು ವಾರ ವಿಸ್ತರಿಸಿದ್ದಾರೆ. ಕೋವಿಡ್ ಪ್ರಕರಣ ಗ್ರಾಮೀಣ ಪ್ರದೇಶದಲ್ಲಿ ಕ್ಷೀಣಿಸುತ್ತಿದೆ. ಪ್ರಕರಣಗಳ ಏರಿಳಿತದ ಹೊರತಾಗಿಯೂ, ಸಾವಿನ ಸಂಖ್ಯೆ ಕಡಿಮೆಯಾಗಿಲ್ಲ . ದಿನ ಸಾವಿನ ಸಂಖ್ಯೆ 450 ದಾಟುತ್ತಿದೆ. ಐಸಿಯು, ವೆಂಟಿಲೇಟರ್ ನಲ್ಲಿ ಇರುವ ಸೋಂಕಿತರ ಸಾವು ಹೆಚ್ಚಾಗುತ್ತಿದೆ. ಇದೇ ಸಾವಿನ ಸಂಖ್ಯೆ ಹೆಚ್ಚಳಕ್ಕೆ ಪ್ರಮುಖ ಕಾರಣ ಎಂದು ವಿವರಿಸಿದರು.
ಇನ್ನೊಂದು ವಾರದ ನಂತರ ರಾಜ್ಯದಲ್ಲಿ ಸಾವಿನ ಸಂಖ್ಯೆ ಕಡಿಮೆಯಾಗುವ ನಿರೀಕ್ಷೆ ಇದೆ. ದೇಶದಲ್ಲೇ ಅತಿ ಹೆಚ್ಚು ಲಸಿಕೆ ಪಡೆದ ಹೆಗ್ಗಳಿಕೆ ಒಳಪಟ್ಟ ಬೆಂಗಳೂರು ಆಗಿದೆ. ಬೆಂಗಳೂರಿನಲ್ಲಿ ಒಂದು ಕೋಟಿಗೂ ಜನರಿದ್ದಾರೆ. ಶೇ.28 ರಷ್ಟು ಮಂದಿಗೆ ಲಸಿಕೆ ನೀಡಲಾಗಿದೆ ಎಂದು ಹೇಳಿದರು.