ತಿರುವನಂತಪುರಂ, ಜೂ.04 (DaijiworldNews/HR): ಕೊರೊನಾ ಬಿಕ್ಕಟ್ಟನ್ನು ಎದುರಿಸಲು ಕೇರಳ ಸರ್ಕಾರ ಈ ಬಾರಿಯ ಬಜೆಟ್ನಲ್ಲಿ 20ಸಾವಿರ ಕೋಟಿ ಮೊತ್ತದ ಪ್ಯಾಕೇಜ್ ಘೋಷಿಸಿದೆ.
ಹಣಕಾಸು ಸಚಿವ ಕೆ.ಎನ್.ಬಾಲಗೋಪಾಲ್
ಕೇರಳದ ಹಣಕಾಸು ಸಚಿವ ಕೆ.ಎನ್.ಬಾಲಗೋಪಾಲ್ ಅವರು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನೇತೃತ್ವದ ಎರಡನೇ ಅವಧಿಯ ಸರ್ಕಾರದ ಮೊದಲ ಬಜೆಟ್ ಅನ್ನು ಶುಕ್ರವಾರ ಮಂಡಿಸಿದ್ದಾರೆ.
ಇನ್ನು ಹಣಕಾಸಿನ ಪ್ಯಾಕೇಜ್ವೊಂದಿಗೆ 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ಉಚಿತವಾಗಿ ಲಸಿಕೆ ನೀಡಲು 1 ಸಾವಿರ ಕೋಟಿ ಹಣವನ್ನು ತೆಗೆದಿರಿಸಿದ್ದು, ಜೊತೆಗೆ ಉಚಿತ ಲಸಿಕೆ ನೀಡಲು ಬೇಕಾದ ಉಪಕರಣಗಳು ಮತ್ತು ಸೌಲಭ್ಯಗಳಿಗಾಗಿ ಹೆಚ್ಚುವರಿಯಾಗಿ 500 ಕೋಟಿ ಮೀಸಲಿಟ್ಟಿರುವುದಾಗಿ ತಿಳಿಸಿದ್ದಾರೆ.
ಹೊಸ ಬಜೆಟ್ನಲ್ಲಿ ಆರೋಗ್ಯ ಮತ್ತು ಆಹಾರ ಭದ್ರತೆಗೆ ಒತ್ತು ನೀಡಲಾಗಿದ್ದು, ರಾಜ್ಯದಲ್ಲಿ ಸಾಂಕ್ರಾಮಿಕ ರೋಗದ ತೀವ್ರತೆಯನ್ನು ಕಡಿಮೆ ಮಾಡುವುದು ಮತ್ತು ಮೂರನೇ ಅಲೆಯನ್ನು ಪರಿಣಾಮಕಾರಿಯಾಗಿ ಎದುರಿಸುವುದು ನಮ್ಮ ಸರ್ಕಾರದ ಆದ್ಯತೆಯಾಗಿದೆ" ಎಂದು ಕೆ.ಎನ್.ಬಾಲಗೋಪಾಲ್ ತಿಳಿಸಿದ್ದಾರೆ.