ಬೆಂಗಳೂರು, ಜೂ. 04 (DaijiworldNews/SM): ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಸೋಂಕು ನಿಯಂತ್ರಣಕ್ಕೆ ಬರುತ್ತಿದೆ. ಶುಕ್ರವಾರದಂದು 16068 ಮಂದಿಯಲ್ಲಿ ಪಾಸಿಟಿವ್ ದೃಢಪಟ್ಟಿದೆ.
ಇನ್ನು ರಾಜ್ಯದಲ್ಲಿ ಶುಕ್ರವಾರದಂದು 22316 ಮಂದಿ ಗುಣಮುಖರಾಗಿದ್ದು, ಆ ಮೂಲಕ ಗುಣಮುಖರಾದವರ ಸಂಖ್ಯೆ 2358412ಕ್ಕೆ ತಲುಪಿದೆ. ಶುಕ್ರವಾರದಂದು 364 ಮಂದಿ ಸೋಂಕಿಗೆ ಬಲಿಯಾಗಿದ್ದು, ಸೋಂಕಿಗೆ ಬಲಿಯಾದವರ ಒಟ್ಟು ಸಂಖ್ಯೆ 30895ಕ್ಕೆ ತಲುಪಿದೆ. ಇಲ್ಲಿಯ ತನಕ 2669514 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, 280186 ಮಂದಿ ಪ್ರಸುತ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೆಂಗಳೂರು ನಗರದಲ್ಲಿ 3221 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, 206 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಬೀದರ್ ನಲ್ಲಿ 19 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಇಬ್ಬರು ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ.