ಬೆಂಗಳೂರು, ಜೂ.5(DaijiworldNews/HR): ಕರ್ನಾಟಕದಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಬಂದರೆ ಜೂನ್ 14ರವರೆಗೆ ವಿಧಿಸಲಾಗಿದ್ದ ಲಾಕ್ಡೌನ್ ಅನ್ನು ಸಡಿಲಿಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.
ಈ ಕುರಿತು ಗೃಹ ಕಚೇರಿ ಕೃಷ್ಣಾದಲ್ಲಿ ಮಾತನಾಡಿರುವ ಅವರು, ರಾಜ್ಯದಲ್ಲಿ ಕೊರೊನಾ ಪ್ರಕರಣದಲ್ಲಿ ಇಳಿಕೆ ಕಂಡು ಬಂದರೆ ಸೋಮವಾರದಿಂದ ಲಾಕ್ಡೌನ್ ಸಡಿಲಿಕೆ ಮಾಡುವ ಕುರಿತು ಚಿಂತನೆ ನಡೆಸಲಾಗುವುದು"ಎಂದು ತಿಳಿಸಿದ್ದಾರೆ.
ಇನ್ನು "ಇನ್ನು ಮೂರ್ನಾಲ್ಕು ದಿನ ರಾಜ್ಯದ ಪರಿಸ್ಥಿತಿಯನ್ನು ವಿಶ್ಲೇಷಿಸಿ, ಯಾವ್ಯಾವ ಜಿಲ್ಲೆಗಳಲ್ಲಿ ಪರಿಸ್ಥಿತಿ ಹೇಗಿದೆ ಎಂಬುದನ್ನು ಗಮನಿಸುತ್ತೇವೆ. ನಂತರ ಕ್ರಮ ಕೈಗೊಳ್ಳುತ್ತೇವೆ" ಎಂದಿದ್ದಾರೆ.
ಪ್ಯಾಕೇಜ್ ಕುರಿತು ಪ್ರತಿಕ್ರಿಯಿಸದ ಅವರು, "ಲಾಕ್ಡೌನ್ ಕಾರಣವಾಗಿ ಪ್ಯಾಕೇಜ್ ಘೋಷಣೆ ಮಾಡಿದ್ದು, ಇಂದು ಕಟ್ಟಡ ಕಾರ್ಮಿಕರಿಗೆ ತಲಾ 3 ಸಾವಿರ ರೂ. ಹಣ ಬಿಡುಗಡೆ ಮಾಡಿದ್ದೇವೆ. ಒಟ್ಟು 25 ಲಕ್ಷ ಕಾರ್ಮಿಕರಿಗೆ ಹಣ ಬಿಡುಗಡೆಯಾಗಿದೆ" ಎಂದರು.
ಇನ್ನು ಕರ್ನಾಟಕದಲ್ಲಿ ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಇಳಿಕೆ ಕಂಡುಬರದ ಹಿನ್ನಲೆಯಲ್ಲಿ ಜೂನ್ 3ರಂದು ಮತ್ತೆ ಒಂದು ವಾರಗಳ ಕಾಲ ಲಾಕ್ಡೌನ್ ವಿಸ್ತರಣೆ ಮಾಡಿ ಘೋಷಣೆ ಮಾಡಲಾಗಿತ್ತು.