ನವದೆಹಲಿ, ಜೂ.5(DaijiworldNews/HR): ಹೊಸ ಐಟಿ ನಿಯಮಗಳನ್ನು ರೂಪಿಸಿ ಅಧಿಸೂಚನೆಯನ್ನು ಹೊರಡಿಸಿರುವ ಕೇಂದ್ರ ಸರ್ಕಾರ ಈಗಾಗಲೇ ವಾಟ್ಸ್ ಆಪ್ ಸೇರಿದಂತೆ ಅನೇಕ ಸೋಷಿಯಲ್ ಮೀಡಿಯಾಗಳಿಗೆ ಹೊಸ ಐಟಿ ನಿಯಮಗಳನ್ನು ಪಾಲಿಸುವಂತೆ ಸೂಚಿಸಿದ್ದು, ಈಗ ಟ್ವಿಟ್ಟರ್ಗೆ ಅಂತಿಮ ಸೂಚನೆ ನೀಡಿದೆ.
ಸಾಂಧರ್ಭಿಕ ಚಿತ್ರ
ಈ ಕುರಿತು ಕೇಂದ್ರ ಸರ್ಕಾರದ ಮುಖ್ಯ ಅನುಸರಣಾ ಅಧಿಕಾರಿಯವರು ವಿವರಗಳನ್ನು ಒಳಗೊಂಡಂತ ಹೊಸ ಐಟಿ ನಿಯಮಗಳ್ನು ಪಾಲಿಸುವ ಪತ್ರ ಬರೆದು, ಕೇಂದ್ರ ಸರ್ಕಾರದ ಹೊಸ ಐಟಿ ನಿಯಮಗಳನ್ನು ಪಾಲಿಸುವಂತೆ ಅಂತಿಮ ಸೂಚನೆಯನ್ನು ಪತ್ರದ ಮೂಲಕ ತಿಳಿಸಿದೆ ಎಂದು ವರದಿಯಾಗಿದೆ.
ಇನ್ನು ಇಂದು ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರ ವೈಯಕ್ತಿಕ ಟ್ವಿಟ್ಟರ್ ಖಾತೆಯ ಬ್ಲೂ ಟಿಕ್ ರದ್ದು ಪಡಿಸಿದ ಟ್ವೀಟರ್ ವಿವಾದಕ್ಕೂ ಗುರಿಯಾಗಿದ್ದು, ಆ ಬಳಿಕ ಮರುಸ್ಥಾಪಿಸಿತ್ತು.
ಆದಾದ ಬಳಿಕ ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಸೇರಿದಂತೆ ವಿವಿಧ ಆರ್ಎಸ್ಎಸ್ ಮುಖಂಡರಿಗೆ ನೀಡಿದ್ದಂತ ಬ್ಲೂ ಟಿಕ್ ವೆರಿಫಿಕೇಷನ್ ಬ್ಯಾಡ್ಜ್ ಅನ್ನು ರದ್ದುಗೊಳಿಸಿದೆ ಎನ್ನಲಾಗಿದೆ.