ಬೆಂಗಳೂರು, ಜೂ.5(DaijiworldNews/HR): ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಕೊರೊನಾ ಹೊಸ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಇಳಿಮುಖ ಖಂಡಿದೆ ಎಂದು ವರದಿಯಾಗಿದೆ.
ಸಾಂಧರ್ಭಿಕ ಚಿತ್ರ
ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿರುವ ವರದಿಗಳ ಪ್ರಕಾರ, ಕಳೆದ 24 ಗಂಟೆ ಅವಧಿಯಲ್ಲಿ ಹೊಸದಾಗಿ 13, 800 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಇದೇ ವೇಳೆ 365 ಜನರು ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಹಾಗೂ 25346 ಜನ ಸೋಂಕಿತರು ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಇನ್ನು ರಾಜ್ಯದಲ್ಲಿ 2,68,275 ಸಕ್ರಿಯ ಪ್ರಕರಣಗಳು ಇದ್ದು, ಒಟ್ಟು ಸೋಂಕಿತರ ಸಂಖ್ಯೆ 26,83,314 ಕ್ಕೆ ಏರಿಕೆಯಾಗಿದೆ. ಇದುವರೆಗೆ ಮೃತಪಟ್ಟವರ ಸಂಖ್ಯೆ 31.260 ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿಂದು 25,346 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಇದುವರೆಗೆ 23,83,758 ಜನ ಗುಣಮುಖರಾಗಿದ್ದಾರೆ.