ಕೋಲ್ಕತ್ತ, ಜೂ.06 (DaijiworldNews/HR): ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಸೋದರಳಿಯ, ಸಂಸದ ಅಭಿಷೇಕ್ ಬ್ಯಾನರ್ಜಿ ಅವರನ್ನು ಟಿಎಂಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಿದ್ದಾರೆ.
ಈ ಕುರಿತು ಟಿಎಂಸಿ ಹಿರಿಯ ಮುಖಂಡ ಪಾರ್ಥ ಚಟರ್ಜಿ ಅವರು ಮಾಹಿತಿ ನೀಡಿದ್ದು, "ಪಕ್ಷದಲ್ಲಿ ಒಬ್ಬ ವ್ಯಕ್ತಿಗೆ ಒಂದು ಹುದ್ದೆಯನ್ನು ಮಾತ್ರ ನೀಡಬೇಕು ಎಂದು ಕಾರ್ಯಕಾರಿ ಸಮಿತಿ ನಿರ್ಧರಿಸಿದೆ. ಅದಕ್ಕೆ ಕೋರ್ ಕಮಿಟಿಯು ಅನುಮೋದನೆ ನೀಡಿದೆ" ಎಂದು ತಿಳಿಸಿದ್ದಾರೆ.
ಇನ್ನು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯನ್ನು ಈ ಹಿಂದೆ ಸುಬ್ರತಾ ಬಕ್ಷಿ ಅವರು ನಿರ್ವಹಿಸಿದ್ದು, ನಟಿ ಹಾಗೂ ಟಿಎಂಸಿ ನಾಯಕಿ ಸಯೋನಿ ಘೋಷ್ ಅವರನ್ನು ಯುವ ಘಟಕದ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.