ಬೆಂಗಳೂರು, ಜೂ.06 (DaijiworldNews/HR): ಹೈಕಮಾಂಡ್ ಸೂಚಿಸಿದರೆ ತಕ್ಷಣ ರಾಜೀನಾಮೆ ನೀಡುತ್ತೇನೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಸ್ಫೋಟಕ ಹೇಳಿಕೆಯೊಂದನ್ನು ನೀಡಿದ್ದಾರೆ.
ಈ ಕುರಿತು ವಿಧಾನಸೌಧದಲ್ಲಿ ಮಾತನಾಡಿದ, "ನನ್ನ ಮೇಲೆ ಬಿಜೆಪಿ ಹೈಕಮಾಂಡ್ಗೆ ಎಲ್ಲಿಯವರೆಗೆ ವಿಶ್ವಾಸವಿರುತ್ತೋ ಅಲ್ಲಿಯವರೆಗೆ ಮುಖ್ಯಮಂತ್ರಿ ಪದವಿಯಲ್ಲಿ ಮುಂದುವರಿಯುತ್ತೇನೆ, ನನ್ನ ಶಕ್ತಿಮೀರಿ ಕೆಲಸ ಮಾಡಿದ್ದೇನೆ ಮುಂದೆ ಕೂಡ ಮಾಡುತ್ತೇನೆ. ಈ ವಿಷಯದಲ್ಲಿ ನನಗೆ ಯಾವುದೇ ಗೊಂದಲ ಇಲ್ಲ" ಎಂದಿದ್ದಾರೆ.
ಇನ್ನು ದೇಶ, ರಾಜ್ಯದಲ್ಲಿ ಪರ್ಯಾಯ ನಾಯಕರು ಇರುತ್ತಾರೆ, ನಾನು ಯಾರ ಬಗ್ಗೆ ಕೂಡ ಟೀಕೆ ಮಾಡುವುದಿಲ್ಲ, ಯಾವುದೇ ಗೊಂದಲವಿಲ್ಲದೆ ರಾಜೀನಾಮೆ ಕೊಟ್ಟು ರಾಜ್ಯದ ಜನತೆಗಾಗಿ ಮತ್ತು ಅಭಿವೃದ್ಧಿಗಾಗಿ ಕೆಲಸ ಮಾಡುತ್ತೇನೆ" ಎಂದು ಹೇಳಿದ್ದಾರೆ.