ರಾಮನಗರ, ಜೂ.06 (DaijiworldNews/HR): ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಬಗ್ಗೆ ಮಾತನಾಡಿದರೆ ಸುಮ್ಮನೆ ವಿವಾದವಾಗುತ್ತದೆ, ಹಾಗಾಗಿ ನನ್ನನ್ನು ಜಾಸ್ತಿ ಮಾತನಾಡಿಸಬೇಡಿ ಎಂದು ಸಚಿವ ಸಿ.ಪಿ.ಯೋಗೇಶ್ವರ್ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು. "ನನ್ನ ಹೇಳಿಕೆ ಸಾಕಷ್ಟು ಸುದ್ದಿಯಾಗಿದ್ದು, ನಾನು ಮುಖ್ಯಮಂತ್ರಿ ಬಗ್ಗೆ ಮಾತನಾಡುವುದಿಲ್ಲ. ಅವರ ಬಗ್ಗೆ ನಾನು ಯಾವತ್ತು ಹಾರ್ಡ್ ಅಗಿ ಮಾತನಾಡಿಲ್ಲ, ಯಡಿಯೂರಪ್ಪ ಅವರ ಬಗ್ಗೆ ನನ್ನಲ್ಲಿ ಮಾತನಾಡಿ ಯಾವುದೇ ಗೊಂದಲಕ್ಕೆ ಸಿಲುಕಿಸ ಬೇಡಿ" ಎಂದರು.
ಇನ್ನು ಬಿಜೆಪಿ ಪಕ್ಷಕ್ಕೆ ಯಡಿಯೂರಪ್ಪ ನವರೇ ನಾಯಕರು. ನಾನು ಅವರ ಬಗ್ಗೆ ಹಿಂದೆಯೂ ಮಾತನಾಡಿಲ್ಲ, ಈಗಲೂ ಮಾತನಾಡಲ್ಲ. ನಮ್ಮದು ರಾಷ್ಟ್ರೀಯ ಪಕ್ಷ. ಹೈಕಮಾಂಡ್ ರಾಜೀನಾಮೆ ಕೇಳಿದರೆ ಕೊಡಬೇಕಾಗುತ್ತೆ" ಎಂದಿದ್ದಾರೆ.
"ನಾನು ಎಂದಿಗೂ ವಿರೋಧ ಪಕ್ಷಗಳು ವಿರೋಧ ಪಕ್ಷವಾಗಿ ಕೆಲಸ ಮಾಡುತ್ತಿಲ್ಲ. ವಿರೋಧ ಪಕ್ಷಗಳು ನಮ್ಮ ಪಕ್ಷದವರ ಜೊತೆಯಲ್ಲಿ ಚೆನ್ನಾಗಿ ಇದ್ದಾರೆ. ಹಾಗಾಗಿ ನಾವೇ ವಿರೋಧ ಪಕ್ಷವಾಗಿ ಕೆಲಸ ಮಾಡುವ ಸಂದರ್ಭ ಬಂತು" ಎಂದು ಹೇಳಿದ್ದಾರೆ.