ಬೆಂಗಳೂರು, ಜೂ. 06(DaijiworldNews/SM): ರಾಜ್ಯದಲ್ಲಿ ಕೊರೋನಾ ಸೋಂಕು ನಿಯಂತ್ರಣಕ್ಕೆ ಬರುತ್ತಿದ್ದು, ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿದೆ. ರವಿವಾರದಂದು 12209 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ.
ರವಿವಾರದಂದು 25659 ಮಂದಿ ರಾಜ್ಯದಲ್ಲಿ ಗುಣಮುಖರಾಗಿದ್ದಾರೆ. ಆ ಮೂಲಕ ಒಟ್ಟು ಗುಣಮುಖರಾದವ ಸಂಖ್ಯೆ 2409417ಕ್ಕೆ ಏರಿಕೆಯಾಗಿದೆ. ಮತ್ತೆ 320 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಆ ಮೂಲಕ ಒಟ್ಟು ಸೋಂಕಿಗೆ ಬಲಿಯಾದವರ ಸಂಖ್ಯೆ 31580ಕ್ಕೆ ಏರಿಕೆಯಾಗಿದೆ.
ಇನ್ನು ರಾಜ್ಯದಲ್ಲಿ ಇಲ್ಲಿಯ ತನಕ 2695523 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಈ ಪೈಕಿ 254505 ಮಂದಿ ಪ್ರಸ್ತುತ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇನ್ನುರವಿವಾರದಂದು ಬೆಂಗಳೂರು ನಗರದಲ್ಲಿ 2944 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, 187 ಮಂದಿ ಸೋಂಕಿನಿಂದಾಗಿ ಸಾವನ್ನಪ್ಪಿದ್ದಾರೆ. ಬೀದರ್ ನಲ್ಲಿ ಇಂದು 7 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ.