ಬೆಂಗಳೂರು, ಜೂ 07 (DaijiworldNews/MS): ಮಾಜಿ ಸಚಿವ,ವಿಧಾನ ಪರಿಷತ್ನ ಮಾಜಿ ಸದಸ್ಯ, ಪ್ರೊ. ಮುಮ್ತಾಜ್ ಅಲಿ ಖಾನ್ ನಿಧನರಾಗಿದ್ದಾರೆ. 94 ವರ್ಷದ ಅವರು ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು ನಗರದ ಗಂಗಾನಗರ ನಿವಾಸದಲ್ಲಿ ಜೂ 7 ರ ಸೋಮವಾರ ಮುಂಜಾನೆ ಮೃತಪಟ್ಟಿದ್ದಾರೆ.
ಇವರು 2008ರಲ್ಲಿ ಯಡಿಯಾರಪ್ಪ ಸಂಪುಟದಲ್ಲಿ ಅವರು ಹಜ್ , ವಕ್ಫ್ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವರಾಗಿ ಕಾರ್ಯನಿರ್ವಹಿಸಿದ್ದರು.
ಬಿಜೆಪಿಯಿಂದ ಮುಮ್ತಾಜ್ ಅಲಿಖಾನ್ ವಿಧಾನ ಪರಿಷತ್ ಸದಸ್ಯರಾಗಿ ನಾಮ ನಿರ್ದೇಶಿತಗೊಂಡಿದ್ದರು. 2013ರಲ್ಲಿ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ಸೇರಿದ್ದರು . ಆ ಬಳಿಕ 2015ರಲ್ಲಿ ಕಾಂಗ್ರೆಸ್ ಪಕ್ಷವನ್ನು ತೊರೆದಿದ್ದರು.
ಮುಮ್ತಾಜ್ ಅವರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ್ಯ ನಳಿನ್ ಕುಮಾರ್ " ರಾಜ್ಯದ ಮಾಜಿ ಸಚಿವರಾಗಿದ್ದ ಡಾ. ಮುಮ್ತಾಜ್ ಅಲಿ ಖಾನ್ ಸಾಹೇಬ್ ಅವರು ನಿಧನರಾಗಿರುವ ವಿಚಾರ ತಿಳಿದು ಬೇಸರವಾಯಿತು. ಅವರ ಕುಟುಂಬದವರಿಗೆ ದೇವರು ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮಾಡಿ ಸಂತಾಪ ವ್ಯಕ್ತಪಡಿಸಿದ್ದಾರೆ.