ಬೆಂಗಳೂರು, ಜೂ. 07(DaijiworldNews/SM): ರಾಜ್ಯದಲ್ಲಿ ಕೊರೋನಾ ಸೋಂಕು ಇಳಿಕೆಯಾಗುತ್ತಿದೆ. ಸೋಮವಾರದಂದು 11958 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಮತ್ತೊಂದೆಡೆ ಮರಣ ಪ್ರಮಾಣ ಕೂಡ ಇಳಿಕೆಯಾಗಿದ್ದು, ಇಂದು 340 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.
ಇನ್ನು ಇಂದು 27299 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಆ ಮೂಲಕ ಸೋಂಕಿನಿಂದ ಬಿಡುಗಡೆಗೊಂಡವರ ಸಂಖ್ಯೆ 2436716ಕ್ಕೆ ಏರಿಕೆಯಾಗಿದೆ. ಇನ್ನು ಇಲ್ಲಿಯ ತನಕ ಒಟ್ಟು 2707481 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, 31920 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. 238824 ಮಂದಿ ಪ್ರಸ್ತುತ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೆಂಗಳೂರು ನಗರದಲ್ಲಿ 1992 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, 199 ಮಂದಿ ಇಂದು ಸೋಂಕಿಗೆ ಬಲಿಯಾಗಿದ್ದಾರೆ. ಬೀದರ್ ನಲ್ಲಿ 13 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ.