ನವದೆಹಲಿ, ಜೂ.08 (DaijiworldNews/HR): ಭಾರತದಲ್ಲಿ ಕೊರೊನಾ ಪ್ರಕರಣಗಳು ಇಳಿಕೆ ಕಂಡಿದ್ದು, ಕಳೆದ 24 ಗಂಟೆಯಲ್ಲಿ 86,498 ಜನರಲ್ಲಿ ಸೋಂಕು ಪತ್ತೆಯಾಗಿದ್ದು, ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2,89,96,473ಕ್ಕೆ ಏರಿಕೆಯಾಗಿದೆ.
ಸಾಂಧರ್ಭಿಕ ಚಿತ್ರ
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ಪ್ರಕಾರ, ಕಳೆದ 24 ಗಂಟೆಯಲ್ಲಿ 2,123 ಮಂದಿ ಕೊರೊನಾಗೆ ಬಲಿಯಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 3,51,309ಕ್ಕೆ ಏರಿಕೆಯಾಗಿದೆ.
ಇನ್ನು ಭಾರತದಲ್ಲಿ 13,03,702 ಕೊರೊನಾ ಸಕ್ರಿಯ ಪ್ರಕರಣಗಳಿದ್ದು 2,73,41,462 ಸೋಂಕಿತರು ಗುಣಮುಖರಾಗಿದ್ದು, ಕಳೆದ 24 ಗಂಟೆಯಲ್ಲಿ 1,82,282 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ದೇಶದಲ್ಲಿ ಈವರೆಗೆ 23,61,98,726 ಜನರಿಗೆ ಕೊರೊನಾ ಲಸಿಕೆ ನೀಡಲಾಗಿದೆ.