ಪುಣೆ, ಜೂ.08 (DaijiworldNews/HR): ಮಹಾರಾಷ್ಟ್ರದ ಪುಣೆಯಲ್ಲಿ ಕೆಮಿಕಲ್ ಕಾರ್ಖಾನೆಯ ಸ್ಯಾನಿಟೈಸರ್ ಉತ್ಪಾದನಾ ಘಟಕದಲ್ಲಿ ಅಗ್ನಿ ಅವಘಡ ಸಂಭವಿಸಿ ಸುಮಾರು 18 ಮಂದಿ ಮೃತಪಟ್ಟಿರುವ ಘಟನೆ ಸೋಮವಾರ ರಾತ್ರಿ ನಡೆದಿದೆ.
ಘಟನಾ ಸ್ಥಳಕ್ಕೆ 6 ಅಗ್ನಿಶಾಮಕ ವಾಹನಗಳು ಆಗಮಿಸಿ, ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿ, ಬೆಂಕಿಯನ್ನು ಹಾರಿಸುವಲ್ಲಿ ಯಶಸ್ವಿಯಾಗಿದೆ.
ಸ್ಥಳೀಯರ ಮಾಹಿತಿ ಪ್ರಕಾರ ಸ್ಯಾನಿಟೈಸರ್ ಉತ್ಪಾದನಾ ಘಟಕದಲ್ಲಿ ಒಟ್ಟು 37 ಮಂದಿ ಕೆಲಸಗಾರರಿದ್ದು, ಅದರಲ್ಲಿ18 ಮಂದಿ ಮೃತಪಟ್ಟಿದ್ದಾರೆ. ಇದುವರೆಗೂ 20 ಮಂದಿಯನ್ನು ರಕ್ಷಿಸಲಾಗಿದೆ.
ಇನ್ನು ಕಾರ್ಖಾನೆ ಆವರಣದಲ್ಲಿ ಪ್ಲಾಸ್ಟಿಕ್ ವಸ್ತುಗಳನ್ನು ಪ್ಯಾಕ್ ಮಾಡುವಾಗ ಬೆಂಕಿ ಕಾಣಿಸಿಕೊಂಡು, ಕ್ಷಣಾರ್ಧದಲ್ಲಿ ಬೆಂಕಿ ಎಲ್ಲೆಡೆ ಪಸರಿಸಿದೆ ಎಂದು ಅಗ್ನಿಶಾಮಕ ಇಲಾಖೆ ತಿಳಿಸಿದೆ.