ಬೆಂಗಳೂರು, ಜೂ.08 (DaijiworldNews/HR): "ಕರ್ನಾಟಕದಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯನ್ನು ರದ್ದುಪಡಿಸಿರುವುದರಿಂದ ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕೆ ಈ ಬಾರಿ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಅಂಕಗಳನ್ನು ಮಾತ್ರ ಪರಿಗಣಿಸಲು ನಿರ್ಧರಿಸಲಾಗಿದೆ" ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ.
ಈ ಕುರಿತು ಹಿರಿಯ ಅಧಿಕಾರಿಗಳ ಜೊತೆ ಮಂಗಳವಾರ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, "ಆಗಸ್ಟ್ 28 ಮತ್ತು 29ರಂದು ಸಿಇಟಿ ಪರೀಕ್ಷೆ ನಡೆಯಲಿದ್ದು, ಸಿಇಟಿ ಪರೀಕ್ಞಾ ಪದ್ಧತಿಯಲ್ಲಿ ಯಾವುದೇ ಬದಲಾವಣೆ ಇಲ್ಲ. ಪ್ರತಿ ವಿಷಯ 60 ಅಂಕಗಳ ಪರೀಕ್ಷೆ ಆಗಿರುತ್ತದೆ" ಎಂದರು.
ಇನ್ನು "ಮೊದಲ ದಿನ ಜೀವ ವಿಜ್ಞಾನ ಮತ್ತು ಗಣಿತ, ಎರಡನೇ ದಿನ ಭೌತ ವಿಜ್ಞಾನ ಮತ್ತು ರಸಾಯನವಿಜ್ಞಾನ ಪರೀಕ್ಷೆ ನಡೆಯಲಿದೆ. ಆಗಸ್ಟ್ 30ರಂದು ಪ್ರತ್ಯೇಕ ಕನ್ನಡ ಪರೀಕ್ಷೆ ನಡೆಯಲಿದ್ದು, ಸಿಇಟಿಗೆ ನೋಂದಣಿ ಜೂನ್ 15ರಿಂದ ಆರಂಭವಾಗಲಿದೆ" ಎಂದು ಮಾಹಿತಿ ನೀಡಿದ್ದಾರೆ.
ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕೆ ಈ ಬಾರಿ ಸಿಇಟಿ ಅಂಕಗಳನ್ನು ಮಾತ್ರ ಪರಿಗಣಿಸುವಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ಕುಮಾರ್ ಪತ್ರ ಬರೆದಿದ್ದು, ಈ ವಿಷಯದಲ್ಲಿ ಚರ್ಚೆ ನಡೆಯಿತು ಎಂದು ಹೇಳಿದ್ದಾರೆ.