ನವದೆಹಲಿ, ಜೂ 8 (DaijiworldNews/MS): ಎಲ್ಲರಿಗೂ ಕೋವಿಡ್ ಲಸಿಕೆಗಳು ಉಚಿತವಾಗಿದ್ದರೆ, ಖಾಸಗಿ ಆಸ್ಪತ್ರೆಗಳೇಕೆ ಶುಲ್ಕ ವಿಧಿಸುತ್ತಿವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇಂದ್ರ ಸರ್ಕಾರವನ್ನು ಪ್ರಶ್ನೆ ಮಾಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು "ಕೇಂದ್ರದ ವ್ಯಾಕ್ಸಿನೇಷನ್ ನೀತಿಯಲ್ಲಿನ ಬದಲಾವಣೆಗೆ ಸುಪ್ರೀಂ ಕೋರ್ಟ್ ಕಾರಣವಾಗಿದೆ. ವಾಕ್ಸಿನ್ ಡ್ರೈವ್ ಕುರಿತು ಕೇಂದ್ರ ಸರ್ಕಾರವನ್ನು ನಿರಂತರವಾಗಿ ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿತ್ತು. ಇನಾಕ್ಯುಲೇಷನ್ ಡ್ರೈವ್ನಲ್ಲಿ ಅಫಿಡವಿಟ್ ಕೋರಿದ ನಂತರ ಈ ಪ್ರಕಟಣೆ ಬಂದಿದೆ ಒಂದು ವೇಳೆ ಲಸಿಕೆ ಉಚಿತವಾಗಿ ವಿತರಣೆಯಾಗುತ್ತಿದ್ದರೆ ಖಾಸಗಿ ಆಸ್ಪತ್ರೆಗಳೇಕೆ ಲಸಿಕೆಗಳಿಗೆ ಶುಲ್ಕು ವಿಧಿಸುತ್ತಿವೆ ಎಂದು ಪ್ರಶ್ನಿಸಿದ್ದಾರೆ.
ಪ್ರಧಾನಿ ಮೋದಿ 18 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಉಚಿತ ಲಸಿಕೆ ಘೋಷಣೆ ಮಾಡಿದ ಬೆನ್ನಲ್ಲೇ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ಉಚಿತ ಲಸಿಕೆ ಘೋಷಣೆಯ ಕ್ರೆಡಿಟ್ ಸುಪ್ರೀಂ ಕೋರ್ಟ್ ಗೆ ಸಲ್ಲಬೇಕು. ಲಸಿಕೆ ಅಭಿಯಾನದ ಕುರಿತು ಕೇಂದ್ರ ಸರ್ಕಾರವನ್ನು ನಿರಂತರವಾಗಿ ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿತ್ತು. ಇದೀಗ ಕೇಂದ್ರ ಸರ್ಕಾರ ಎಲ್ಲ ಒತ್ತಡಗಳಿಗೆ ಮಣಿದು ಉಚಿತ ಲಸಿಕೆ ಘೋಷಣೆ ಮಾಡಿದೆ. ಒಂದು ವೇಳೆ ಲಸಿಕೆ ಉಚಿತವಾಗಿ ವಿತರಣೆಯಾಗುತ್ತಿದ್ದರೆ ಖಾಸಗಿ ಆಸ್ಪತ್ರೆಗಳೇಕೆ ಲಸಿಕೆಗಳಿಗೆ ಶುಲ್ಕು ವಿಧಿಸುತ್ತಿವೆ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.
ಜೂ.೭ ರ ಸಂಜೆ ದೇಶವನ್ನುದ್ದೇಶಿ ಮಾಡಿದ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ " ದೇಶದ ಎಲ್ಲ ರಾಜ್ಯಗಳಿಗೂ ಕೇಂದ್ರ ಸರ್ಕಾರ ಉಚಿತವಾಗಿಯೇ ಲಸಿಕೆಯನ್ನು ನೀಡಲಿದೆ. ಲಸಿಕೆಗಾಗಿ ಯಾವುದೇ ರಾಜ್ಯವೂ ಕೇಂದ್ರಕ್ಕೆ ಹಣ ನೀಡಬೇಕಾಗಿಲ್ಲ ಎಂದಿರುವ ಪ್ರಧಾನಿ, ಅಂತಾರಾಷ್ಟ್ರೀಯ ಯೋಗದಿನವಾದ ಜೂ. 21ರಿಂದ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತವಾಗಿ ಲಸಿಕೆ ನೀಡಲಾಗುವುದು ಎಂದು ಹೇಳಿದ್ದರು.