ಬೆಂಗಳೂರು, ಜೂ.08 (DaijiworldNews/HR): ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರದ್ದು ಎನ್ನಲಾಗಿರುವ ಸಿ.ಡಿ ಪ್ರಕರಣದ ಸೂತ್ರದಾರಿಗಳು ಎನ್ನಲಾದ ಮಾಜಿ ಪತ್ರಕರ್ತ ನರೇಶ್ ಗೌಡ ಹಾಗೂ ಶ್ರವಣ್ಗೆ ಬೆಂಗಳೂರಿನ 91ನೇ ಸಿಸಿಹೆಚ್ ಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ ಎಂದು ತಿಳಿದು ಬಂದಿದೆ.
ಸಿ.ಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾರ್ಚ್ 2 ರಿಂದ ತಲೆಮರೆಸಿಕೊಂಡಿರುವ ನರೇಶ್ ಗೌಡ ಹಾಗೂ ಶ್ರವಣ್ ಅವರನ್ನು ಪತ್ತೆಹಚ್ಚಲು ತನಿಖಾ ತಂಡ ಶ್ರಮಿಸುತ್ತಿತ್ತು. ಈ ಇಬ್ಬರ ಮೇಲೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹನಿಟ್ರ್ಯಾಪ್ ಮತ್ತು ಬ್ಲ್ಯಾಕ್ಮೇಲ್ ಆರೋಪ ಮಾಡಿದ್ದರು.
ಇನ್ನು ಮೇ 31ರಂದು ಮಾಜಿ ಸಚಿವ, ಶಾಸಕ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ವಿಚಾರಣೆ ನಡೆಸಿದ ಧಾರವಾಡ ಹೈಕೋರ್ಟ್ ವಿಭಾಗೀಯ ಪೀಠ ಯುವತಿ ತಂದೆ ದಾಖಲಿಸಿದ್ದ ಹೆಬಿಯಸ್ ಕಾರ್ಪಸ್ ಅರ್ಜಿ ಇತ್ಯರ್ಥಗೊಳಿಸಿದೆ.