ನವದೆಹಲಿ, ಜೂ 09 (DaijiworldNews/MS): ಭಾರತದಲ್ಲಿ ಕಳೆದ ಎರಡು ದಿನಗಳಿದ 1 ಲಕ್ಷಕ್ಕೂ ಕಡಿಮೆ ಸಂಖ್ಯೆಯಲ್ಲಿ ಸೋಂಕಿತರು ಪತ್ತೆಯಾಗುತ್ತಿರುವುದು ಕೊಂಚ ನಿರಾಳವಾಗಿದೆ. ಆದರೂ 24 ಗಂಟೆಯಲ್ಲಿ ಸೋಂಕು ಕೊಂಚ ಏರಿಕೆ ಕಂಡಿದ್ದು, ದೇಶದಲ್ಲಿ 92,596 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ಕೊರೊನಾ ಸೋಂಕಿತರ ಸಂಖ್ಯೆ 2,90,89,069ಕ್ಕೆ ಏರಿಕೆಯಾಗಿದೆ.
ಸಾವಿನ ಸಂಖ್ಯೆಯಲ್ಲಿಯೂ ಇಳಿಮುಖವಾಗಿದ್ದು, ಕಳೆದ 24 ಗಂಟೆಯಲ್ಲಿ 2219 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈವರೆಗೆ ದೇಶದಲ್ಲಿ ಕೋವಿಡ್ ಗೆ ಬಲಿಯಾದವರ ಸಂಖ್ಯೆ 3,53,528 ಕ್ಕೆ ಏರಿಕೆಯಾಗಿದೆ.
ಇನ್ನು ದೇಶದಲ್ಲಿ 12,31,415 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು 2,75,04,126 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 1,62,664 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ನಿನ್ನೆ 19,85,967 ಜನರಿಗೆ ಕೋವಿಡ್ ಸ್ಯಾಂಪಲ್ ಪರೀಕ್ಷಿಸಲಾಗಿತ್ತು, ದೇಶದಲ್ಲಿ ಈವರೆಗೆ 37,01,93,563 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ. ದೇಶದಲ್ಲಿ ಈವರೆಗೆ 23,90,58,360 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.