ಬೆಂಗಳೂರು, ಜೂ 10 (DaijiworldNews/MS): ಕೊರೊನಾ ಲಾಕ್ ಡೌನ್ , ಪೆಟ್ರೋಲ್ ಹಾಗೂ ಡೀಸೆಲ್ ದರ ಏರಿಕೆಯಿಂದ ಹೈರಾಣಾಗಿರುವ ಜನತೆಗೆ ಇದೀಗ ರಾಜ್ಯ ಸರ್ಕಾರ ವಿದ್ಯುತ್ ದರ ಏರಿಕೆ ಮಾಡಿ ಶಾಕ್ ನೀಡಿದೆ.
ಪ್ರತಿ ಯೂನಿಟ್'ಗೆ ಸರಾಸರಿ 30 ಪೈಸೆಯಂತೆ ವಿದ್ಯುತ್ ದರವನ್ನು ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಹೆಚ್ಚಳ ಮಾಡಿದೆ. ಇದರ ಪರಿಣಾಮ ಗೃಹ ಬಳಕೆ ಗ್ರಾಹಕರಿಗೆ ಪ್ರತಿ ಯೂನಿಟ್'ಗೆ 10 ಪೈಸೆ ಹೆಚ್ಚಳವಾಗಲಿದೆ. ಪರಿಷ್ಕೃತ ದರವು ಏ.1ರಿಂದಲೇ ಪೂರ್ವಾನ್ವಯವಾಗಲಿದ್ದು, ಕೊರೊನಾ ಸಂಕಷ್ಟದ ಹಿನ್ನೆಲೆಯಲ್ಲಿ ಏಪ್ರಿಲ್ ಮೇ. ತಿಂಗಳ ದರ ಪರಿಷ್ಕರಣೆ ಬಾಕಿಯನ್ನು ಯಾವುದೇ ಬಡ್ಡಿ ವಿಧಿಸದೆ ಅಕ್ಟೋಬರ್ ಮತ್ತು ನವೆಂಬರ್ ತಿಂಗಳಿನಲ್ಲಿ ವಸೂಲಿ ಮಾಡಲು ಎಸ್ಕಾಂಗಳಿಗೆ ಆದೇಶ ನೀಡಿದೆ.
ರಾಜ್ಯದ ವಿವಿಧ ವಿದ್ಯುತ್ ವಿತರಣಾ ಕಂಪನಿಗಳು 1.35 ರೂ. ಬೆಲೆ ಏರಿಕೆ ಮಾಡುವಂತೆ ಸರ್ಕಾರಕ್ಕೆ ಈ ಹಿಂದೆಯೇ ಪ್ರಸ್ತಾವ ಸಲ್ಲಿಸಿದ್ದವು. ಈ ಪ್ರಸ್ತಾವಗಳನ್ನು ಕೂಲಂಕಶವಾಗಿ ಪರಿಶೀಲಿಸಿರುವ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗವು ಸರಾಸರಿ 30 ಪೈಸೆ ದರ ಹೆಚ್ಚಳಕ್ಕೆ ಅನುಮೋದನೆ ನೀಡಿದೆ.
ಇದರಂತೆ ಪ್ರತಿ ಯೂನಿಟ್'ಗೆ ಸರಾಸರಿ 30 ಪೈಸೆಯಂತೆ ವಿದ್ಯುತ್ ದರವನ್ನು ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಹೆಚ್ಚಳ ಮಾಡಿದೆ. ಇದರ ಪರಿಣಾಮ ಗೃಹ ಬಳಕೆ ಗ್ರಾಹಕರಿಗೆ ಪ್ರತಿ ಯೂನಿಟ್'ಗೆ 10 ಪೈಸೆ ಹೆಚ್ಚಳವಾಗಲಿದೆ.
ಉಪಚುನಾವಣೆ, ಪಂಚಾಯತ್ ಚುನಾವಣೆ ಹಾಗು ಕರೋನಾ ಕಾರಣಕ್ಕೆ ದರ ಪರಿಷ್ಕರಣೆ ವಿಳಂಬವಾಗಿದೆ ಎಂದು ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಹೇಳಿದೆ.