ನವದೆಹಲಿ, ಜೂ.10 (DaijiworldNews/HR): ಭಾರತದಲ್ಲಿ ಕೊರೊನಾ ಪ್ರಕರಣಗಳು ಇಳಿಕೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 94,052 ಜನರಿಗೆ ಸೋಂಕು ದೃಢಪಟ್ಟಿದೆ.
ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 94,052 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 2,91,83,121ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 6,148 ಮಂದಿ ಸೋಂಕಿನಿಂದ ಮೃತಪಟ್ಟಿದ್ದು, ಈ ಮೂಲಕ ಕೊರೊನಾ ಸೋಂಕಿಗೆ ಸಾವನ್ನಪ್ಪಿದವರ ಸಂಖ್ಯೆ 3,59,676 ಕ್ಕೆ ಏರಿಕೆಯಾಗಿದೆ.
ಇನ್ನು ಕಳೆದ 24 ಗಂಟೆಯಲ್ಲಿ 1,51,367 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ದೇಶದಲ್ಲಿ ಈವರೆಗೆ 2,76,55,493 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ.
ಸದ್ಯ ದೇಶದಲ್ಲಿ ಇದುವರೆಗೆ ಒಟ್ಟು 23,90,58,360 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ.