ಬೆಂಗಳೂರು, ಜೂ.10 (DaijiworldNews/HR): "ಕಾಂಗ್ರೆಸ್ ನಡೆಸಿದ ಹೋರಾಟ ಫಲವಾಗಿ ಈಗ ದೇಶದಾದ್ಯಂತ ಉಚಿತ ಲಸಿಕೆಯನ್ನು ಕೇಂದ್ರ ಸರ್ಕಾರವು ಘೋಷಣೆ ಮಾಡಿದೆ" ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ''ದೇಶದ ಎಲ್ಲಾ ರಾಜ್ಯಗಳಲ್ಲಿ ಕಾಂಗ್ರೆಸ್ ಪಕ್ಷದವರು ರಾಜ್ಯಪಾಲರನ್ನು ಭೇಟಿ ಮಾಡಿ, ಉಚಿತ ಲಸಿಕೆಗೆ ಒತ್ತಾಯಿಸಿದ್ದು, ನಮ್ಮ ಹೋರಾಟದ ಫಲವಾಗಿ ಈ ಉಚಿತ ಲಸಿಕೆ ಘೋಷಣೆ ಮಾಡಲಾಗಿದೆ'' ಎಂದರು.
ಇನ್ನು ''ನಮ್ಮ ಶಾಸಕರ ನಿಧಿಯಿಂದ ಲಸಿಕೆ ನೀಡಲು ಅನುಮತಿ ನೀಡಿ ಎಂದು ಕೇಂದ್ರಕ್ಕೆ ಮನವಿ ಮಾಡಿದ್ದೆವು. ಆದರೆ ಸರ್ಕಾರ ಅದನ್ನು ನಿರಾಕರಿಸಿತ್ತು. ಈ ಮೂಲಕ ಜನರ ಜೀವ ರಕ್ಷಿಸಲು ಸರಕಾರ ನಿರಾಕರಿಸಿದೆ" ಎಂದು ಆರೋಪಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಸೋಮವಾರ ದೇಶವನ್ನುದ್ದೇಶಿಸಿ ಮಾತನಾಡಿದ್ದಾಗ, ''18 ವರ್ಷ ಮೇಲ್ಪಟ್ಟವರಿಗೆಲ್ಲರಿಗೂ ಕೇಂದ್ರ ಸರ್ಕಾರದಿಂದ ಉಚಿತ ಕೊರೊನಾ ಲಸಿಕೆ ನೀಡಲಾಗುವುದು'' ಎಂದು ಘೋಷಣೆ ಮಾಡಿದ್ದರು.