ಬೆಂಗಳೂರು,ಜೂ 10 (DaijiworldNews/MS): ರಾಜ್ಯದಲ್ಲಿ ಪಾಸಿಟಿವಿಟಿ ದರ ಹೆಚ್ಚಿರುವ 8 ಜಿಲ್ಲೆಗಳಲ್ಲಿ ಜೂ.14ರ ಬಳಿಕವೂ ಲಾಕ್ ಡೌನ್ ಅನ್ನು ಮತ್ತೆ ಒಂದು ವಾರಗಳ ಕಾಲ ವಿಸ್ತರಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗಿದೆ.
8 ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಜಿಲ್ಲಾಧಿಕಾರಿಗಳು ಲಾಕ್ ಡೌನ್ ಅನ್ನು ವಿಸ್ತರಿಸುವಂತೆ ಒತ್ತಾಯಿಸಿದ ನಂತರ, ಮುಖ್ಯಮಂತ್ರಿ ಬಿ.ಎಸ್.ಯಡಿಯುರಪ್ಪ ಈ ನಿರ್ಧಾರ ಕೈಗೊಂಡಿದ್ದಾರೆ.
ಎಂದು ತಿಳಿದುಬಂದಿದೆ.
ದಕ್ಷಿಣ ಕನ್ನಡ, ಮಂಡ್ಯ, ಬೆಳಗಾವಿ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ತುಮಕೂರು, ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಲಾಕ್ಡೌನ್ ಅನ್ನು ಒಂದು ವಾರ ವಿಸ್ತರಿಸಲಾಗುವುದು.
ಇದಲ್ಲದೆ ಇದರ ಜಿಲ್ಲೆಗಳಲ್ಲಿ ಕೊವೀಡ್ ಪರಿಸ್ಥಿತಿ ಅವಲೋಕಿಸಿ ಲಾಕ್ ಡೌನ್ ಸಡಿಲಗೊಳಿಸುವಂತೆ ಜಿಲ್ಲಾಧಿಕಾರಿ ಮತ್ತು ಉಸ್ತುವಾರಿ ಸಚಿವರಿಗೆ ಸೂಚಿಸಿದ್ದಾರೆ.