ನವದೆಹಲಿ, ಜೂ.10 (DaijiworldNews/HR): ಆತ್ಮಹತ್ಯೆಗೆ ಶರಣಾಗಿದ್ದ ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಜೀವನ ಕಥೆಯನ್ನಾಧರಿಸಿದ 'ನ್ಯಾಯ್: ದಿ ಜಸ್ಟೀಸ್' ಸಿನಿಮಾದ ಬಿಡುಗಡೆಗೆ ತಡೆ ನೀಡಬೇಕೆಂಬ ಮನವಿಯನ್ನು ದೆಹಲಿ ಹೈಕೋರ್ಟ್ ನಿರಾಕರಿಸಿದೆ ಎಂದು ತಿಳಿದು ಬಂದಿದೆ.
ನ್ಯಾಯ್: ದಿ ಜಸ್ಟೀಸ್ ಸಿನಿಮಾ ನಾಳೆ ಬಿಡುಗಡೆಯಾಗಲಿದ್ದು, ಈ ಹಿನ್ನೆಲೆಯಲ್ಲಿ ಸುಶಾಂತ್ ತಂದೆ ಕೃಷ್ಣ ಕಿಶೋರ್ ಸಿಂಗ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿದೆ.
ಇನ್ನು ಈ ಸಿನಿಮಾ ನಿರ್ಮಿಸುವ ಮೊದಲು ಕುಟುಂಬದ ಒಪ್ಪಿಗೆ ಪಡೆದಿಲ್ಲ ಹಾಗೂ ಆತ್ಮಹತ್ಯೆಯಲ್ಲಿ ವಿಶ್ವಾಸಿಗರ ಪಾತ್ರವಿದೆ ಎಂಬುದಾಗಿ ಚಿತ್ರೀಕರಿಸಲ್ಪಟ್ಟಿದೆ ಎಂದು ಕಿಶೋರ್ ಸಿಂಗ್ ಅರ್ಜಿಯಲ್ಲಿ ಆರೋಪಿಸಿದ್ದರು.
ಸುಶಾಂತ್ ಪ್ರಕರಣದ ಕುರಿತಂತೆ ಸಿನಿಮಾ ಮಾಡುವ ಬಗ್ಗೆ ವಿವಿಧ ಚಲನಚಿತ್ರ ನಿರ್ಮಾಪಕರಲ್ಲಿ ಹೈಕೋರ್ಟ್ ಏಪ್ರಿಲ್ನಲ್ಲಿ ಪ್ರತಿಕ್ರಿಯೆಯನ್ನು ಕೇಳಿದ್ದು, ತನ್ನ ಮಗನ ಹೆಸರು ಅಥವಾ ಹೋಲಿಕೆಯನ್ನು ಬಳಸಿಕೊಂಡು ಸಿನಿಮಾ ನಿರ್ಮಾಣ ಮಾಡಬಾರದು ಎಂದು ಸುಶಾಂತ್ ತಂದೆ ಹೈಕೋರ್ಟ್ ಮೆಟ್ಟಿಲೇರಿದ ಸಂದರ್ಭದಲ್ಲಿ ಈ ಬೆಳವಣಿಗೆ ನಡೆದಿತ್ತು.